ಉಡುಪಿ: ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಹಿಂದೆ  ಉಡುಪಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಜೆ. ಎನ್. ಸುಬ್ರಮಣ್ಯ ಇವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಅವರ ನೇಮಕವಾಗಿದೆ.

Leave a Reply

Your email address will not be published. Required fields are marked *

error: Content is protected !!