ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣಿಸದಂತೆ ನಾಗರಿಕರಿಗೆ ನಿಷೇಧ ಹೇರಿದ ಸೌದಿ ಅರೇಬಿಯಾ

ರಿಯಾದ್ ಮೇ 23: ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣಿಸದಂತೆ ಸೌದಿ ಅರೇಬಿಯಾ ತನ್ನ ದೇಶದ ನಾಗರಿಕರಿಗೆ ನಿಷೇಧ ಹೇರಿದೆ.

ಕೋವಿಡ್-19 ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ, ಲೆಬನಾನ್, ಸಿರಿಯಾ, ಟರ್ಕಿ, ಇರಾನ್, ಅಫ್ಘಾನಿಸ್ತಾನ, ಯೆಮೆನ್, ಸೊಮಾಲಿಯಾ, ಇಥಿಯೋಪಿಯಾ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಲಿಬಿಯಾ, ಇಂಡೋನೇಷಿಯಾ, ವಿಯೆಟ್ನಾಂ, ಅರ್ಮೇನಿಯಾ, ಬೆಲಾರಸ್ ಮತ್ತು ವೆನೆಜುವೆಲಾ ದೇಶಗಳಿಗೆ ಪ್ರಯಾಣಿಸದಂತೆ ಸೌದಿ ಅರೇಬಿಯಾಗೆ ಪ್ರಯಾಣಿಸದಂತೆ ನಾಗರಿಕರಿಗೆ ಎಚ್ಚರಿಕೆ ನೀಡಿದೆ.

ಈ ದೇಶಗಳಿಗೆ ಪ್ರಯಾಣಿಸಲು ಇಚ್ಚಿಸುವವರಿಗೆ ಈ ನಿಷೇಧವು ಅನ್ವಯಿಸುತ್ತದೆ. ಆದರೆ ಭಾರತೀಯರನ್ನು ಸೌದಿ ಅರೇಬಿಯಾಗೆ ಪ್ರವೇಶಿಸುವುದನ್ನು ನಿಬರ್ಂಧಿಸಿಲಾಗಿದೆಯೇ ಎಂಬುವುದರ ಕುರಿತಂತೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಇನ್ನು ಕೆಲವು ದಿನಗಳಿಂದ ಹಲವಾರು ದೇಶಗಳಲ್ಲಿ ಕೊರೊನಾ ಸೋಂಕಿನ ಜೊತೆಗೆ ಕೆಲವು ದೇಶಗಳಲ್ಲಿ ಮಂಕಿ ಪಾಕ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ಇತರ ದೇಶಗಳಿಗೆ ಪ್ರಯಾಣಿಸದಂತೆ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!