ಹುಬ್ಬಳ್ಳಿ: ಲಾರಿ-ಬಸ್ ನಡುವೆ ಭೀಕರ ರಸ್ತೆ ಅಪಘಾತ, 8 ಮಂದಿ ಮೃತ್ಯು
ಹುಬ್ಬಳ್ಳಿ ಮೇ 24: ಇಲ್ಲಿನ ತಾರಿಹಾಳ ಬೈಪಾಸ್ನಲ್ಲಿ ಲಾರಿ ಮತ್ತು ಬಸ್ ನಡುವೆ ತಡ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದಾರೆ.
ಹುಬ್ಬಳ್ಳಿಯ ತಾರಿಹಾಳ ಬೈಪಾಸ್ನಲ್ಲಿ ತಡ ರಾತ್ರಿ ಸುಮಾರು 1 ಗಂಟೆ ವೇಳೆಗೆ ಅಪಘಾತ ಸಂಭವಿಸಿದ್ದು, 8 ಮಂದಿ ಸಾವಿಗೀಡದಾಗಿದ್ದಾರೆ.ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು,ಅವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಬರುತ್ತಿದ್ದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ನ್ಯಾಷನಲ್ ಟ್ರಾವೆಲ್ಸ್ ಟೂರಿಸ್ಟ್ ಬಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರ ಪೈಕಿ ನಾಲ್ವರನ್ನು ಬಸ್ ಚಾಲಕರಾದ ಅತಾವುಲ್ಲಾ ಹಾಗೂ ನಾಗರಾಜ, ಚಿಕ್ಕೋಡಿಯ ಬಾಬುಸಾಹೇಬ್ (55), ಮೈಸೂರು ಮೂಲದ ಮಹ್ಮದ್ ದಯ್ಯಾನ್ (17) ಎಂದು ಗುರುತಿಸಲಾಗಿದೆ. ಇನ್ನುಳಿದವರ ಹೆಸರು ಗೊತ್ತಾಗಬೇಕಿದೆ. ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತ ಲಾಬೂರಾವ್ ಭೇಟಿ ನೀಡಿ, ಗಾಯಾಳುಗಳಿಗೆ ಸಾಂತ್ವನ ಹೇಳಿದರು.
Supar.news.