| ಶಂಕರನಾರಾಯಣ ಮೇ 24: ಅಕ್ರಮ ಮದ್ಯ ಮಾರಾಟದ ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಮದ ಗುಮ್ಮಲ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆ ಶಂಕರನಾರಾಯಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಧರ ನಾಯ್ಕ ಅವರು ಸ್ಥಳಕ್ಕೆ ದಾಳಿ ನಡೆಸಿ ಯಾವುದೇ ಪರವಾನಿಗೆ ಹೊಂದದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಮೋದ ಪೂಜಾರಿ ಎಂಬಾತನನ್ನು ಹಾಗೂ ಆತನಿಂದ ಮಾರಾಟ ಮದ್ಯ ಮತ್ತು 300 ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮತ್ತೊಂದೆಡೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಮೇಲ್ ಜೆಡ್ಡು ಎಂಬಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ ಕೆ ಅವರು ಸ್ಥಳಕ್ಕೆ ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿದ್ದ ವನಜ (48) ಎಂಬಾಕೆಯನ್ನು ಹಾಗೂ ಆಕೆಯಿಂದ ಮಾರಾಟಕ್ಕೆ ತಂದಿದ್ದ ಮದ್ಯ ಮತ್ತು 400 ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಎರಡೂ ಪ್ರಕರಣಕ್ಕೆ ಸಂಬಂಧಿಸಿ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ
| |