ಹಿರಿಯಡ್ಕ: ಮೇ 28-29 ರಂದು ಹಲಸಿನ ಮೇಳ

ಉಡುಪಿ, ಮೇ 25: ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಜಿಲ್ಲಾ ಕೃಷಿಕ ಸಂಘ, ಶ್ರೀ ಕ್ಷೇತ್ರ ಧರ್ಮಸ್ಥಳ
ಗ್ರಾಮೀಣಾಭಿವೃದ್ಧಿ ಯೋಜನೆ ಉಡುಪಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಮತ್ತು ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ಪಳ್ಳಿ ಶ್ರೀನಿವಾಸ ಹೆಗ್ಡೆಚಾರಿಟೇಬಲ್ ಟ್ರಸ್ಟ್ ಹಾಗೂ ನವ್ಯೋದಯ ಫ್ರೆಂಡ್ಸ್ ಕ್ಲಬ್ ಮತ್ತು ಕೋಟ್ನಕಟ್ಟೆ ಫ್ರೆಂಡ್ಸ್ ಸರ್ಕಲ್ ಹಿರಿಯಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಹಲಸಿನ ಮೇಳ-2022 ಕಾರ್ಯಕ್ರಮವು ಮೇ 28 ಮತ್ತು 29 ರಂದು ಬೆಳಗ್ಗೆ 10 ರಿಂದ ಸಂಜೆ 6 ರ ವರೆಗೆ ಹಿರಿಯಡ್ಕ ಮಹತೋಭಾರ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮೇ 28 ರಂದು ಬೆಳಗ್ಗೆ10.30 ಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹಾಗೂ ವಸ್ತು ಪ್ರದರ್ಶನವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಲಿದ್ದು, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ. ಹನುಮOತಪ್ಪ, ಕರ್ನಾಟಕ ರಾಜ್ಯ ಬಸ್ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೃಷಿಕ ಡಾ.ಡಿ. ಚಂದ್ರಶೇಖರ್ ಚೌಟ, ಉದ್ಯಮಿ ಪಳ್ಳಿ ನಟರಾಜ್ ಹೆಗಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಉಡುಪಿ ತಹಶೀಲ್ದಾರ್ ಡಿ.ಅರ್ಚನಾ ಭಟ್, ಉಡುಪಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ವಿವೇಕಾನಂದ ಗಾಂವಕರ್ ಹಾಗೂ ಮತ್ತಿತರರು ಉಪಸ್ಥಿತರಿರುವರು.

Leave a Reply

Your email address will not be published. Required fields are marked *

error: Content is protected !!