ಹಿರಿಯಡ್ಕ: ಮಟ್ಕಾಕ್ಕೆ ಹಣ ಸಂಗ್ರಹಿಸುತ್ತಿದ್ದಾತ ಪೊಲೀಸರು ವಶಕ್ಕೆ
ಹಿರಿಯಡ್ಕ ಮೇ 25 (ಉಡುಪಿ ಟೈಮ್ಸ್ ವರದಿ): ಉಡುಪಿ ತಾಲೂಕಿನ ಪೆರ್ಡೂರು ಗ್ರಾಮದ ಮುತ್ತುರ್ಮೆ ಬಸ್ ನಿಲ್ದಾಣದ ಹಿಂಭಾಗದಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಹಣ ಸಂಗ್ರಹಿಸುತ್ತಿದ್ದ ಸತೀಶ್ ನಾಯ್ಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪೆರ್ಡೂರು ಮುತ್ತುರ್ಮೆ ಪರಿಸರದಲ್ಲಿ ಮಟ್ಕಾ ಜುಗಾರಿ ಆಟಕ್ಕೆ ವ್ಯಕ್ತಿಯೋರ್ವನು ಹಣ ಸಂಗ್ರಹಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಹಿರಿಯಡ್ಕ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಅನಿಲ್ ಬಿ ಎಂ ಅವರು ಇಂದು ಸ್ಥಳಕ್ಕೆ ತೆರಳಿ ದಾಳಿ ನಡೆಸಿದಾಗ ಸತೀಶ್ ನಾಯ್ಕ್ ಎಂಬಾತ ಮಟ್ಕಾ ಜುಗಾರಿ ಆಟಕ್ಕೆ ಹಣ ಸಂಗ್ರಹಿಸುತ್ತಿರುವುದು ಕಂಡು ಬಂದಿದೆ. ಈ ವೇಳೆ ಸತೀಶ್ ನಾಯ್ಕ್ ಎಂಬಾತನನ್ನು ವಶಕ್ಕೆ ಪಡೆದು ಆತನ ಬಳಿ ಇದ್ದ 980 ರೂ. ನಗದು ಹಾಗೂ ಮಟ್ಕಾ ಜುಗಾರಿ ಆಟಕ್ಕೆ ಬಳಸುವ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.