ಕುಂದಾಪುರ: ಖಾಸಗಿ ಆಸ್ಪತ್ರೆಯ ಮಾಲೀಕ ಗುಂಡು ಹೊಡೆದುಕೊಂಡು ಆತ್ಮಹತ್ಯೆ!
ಕುಂದಾಪುರ: ಖಾಸಗಿ ಆಸ್ಪತ್ರೆಯ ಮಾಲಕರೋರ್ವರು ಇಂದು ಬೆಳಿಗ್ಗೆ ಕೋಟೇಶ್ವರದ ತಮ್ಮ ಮನೆಯ ಸಮೀಪ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕುಂದಾಪುರ ಇಲ್ಲಿನ ಚಿನ್ಮಯ್ ಆಸ್ಪತ್ರೆಯ ಮಾಲೀಕ ಕಟ್ಟೆ ಬೋಜಣ್ಣ (80) ಆತ್ಮಹತ್ಯೆ ಮಾಡಿಕೊಂಡವರು. ಇಂದು ಬೆಳಿಗ್ಗೆ 6.15 ಸುಮಾರಿಗೆ ಲೆಕ್ಕ ಪರಿಶೋಧಕ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟ್ ಔಟ್ ನಲ್ಲಿ ಕಟ್ಟೆ ಬೋಜಣ್ಣ ತಮ್ಮ ರಿವಾಲ್ವರ್ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ, ಪೊಲೀಸ್ ಠಾಣೆಯ ಠಾಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ,ಸಹಾಯವಾಣಿ ನಂಬರ್: 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್- 4, ಬೆಂಗಳೂರು.