ಡಿ.ಕೆ ಶಿವಕುಮಾರ್’ಗೆ ಮತ್ತೆ ಇಡಿ ಶಾಕ್

ಬೆಂಗಳೂರು: ತಮ್ಮ ವಿರುದ್ಧ ಇಡಿ ಚಾರ್ಜ್‌ಶೀಟ್ ಸಲ್ಲಿಸಿರುವುದು ರಾಜಕೀಯ ಪಿತೂರಿ ಎಂದು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. 2023 ರ ಕರ್ನಾಟಕ ಚುನಾವಣೆಯ ಪೂರ್ವದಲ್ಲಿ ಹಲವಾರು ಅಡೆತಡೆಗಳನ್ನು ಎದುರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ನಾನೇನೂ ತಪ್ಪು ಮಾಡಿಲ್ಲ: ನ್ಯಾಯಾಲಯ ಮತ್ತು ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಚಾರ್ಜ್‌ಶೀಟ್ ಕುರಿತು ಮಾಧ್ಯಮಗಳಿಂದ ತಿಳಿದು ಬಂದಿದೆ, ವೈಯಕ್ತಿಕವಾಗಿ ಪ್ರತಿ ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ. ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಏನಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಆರೋಪಪಟ್ಟಿಯಲ್ಲಿ ರಾಜಕೀಯದ ಹೊರತಾಗಿ ಇನ್ನೇನು ಇದೆ ಎಂದು ವ್ಯಂಗ್ಯವಾಡಿದರು.

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಕೆಲವೇ ತಿಂಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಶಿವಕುಮಾರ್ ವಿರುದ್ಧ ಸಲ್ಲಿಸಿರುವ ಆರೋಪ ಪಟ್ಟಿ ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *

error: Content is protected !!