ಕುಂದಾಪುರ: ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣ-ಆರೋಪಿಗಳ ಪತ್ತೆಗೆ ಎರಡು ತಂಡ ರಚನೆ

ಉಡುಪಿ ಮೇ 27: ಉಪ್ಪಿನಕುದ್ರುವಿನ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಬಂಧನಕ್ಕೆ ಕುಂದಾಪುರ ಸಿಪಿಐ ಗೋಪಿಕೃಷ್ಣ ನೇತೃತ್ವದಲ್ಲಿ ಎರಡು ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಟಿ ಸಿದ್ದಲಿಂಗಪ್ಪ ಹೇಳಿದ್ದಾರೆ.

ಈ ವಿಚಾರವಾಗಿ ಇಂದು ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ದೂರಿನಲ್ಲಿ ಉಲ್ಲೇಖಿಸಲಾಗಿರುವ ಅಝೀಜ್‌ ಮತ್ತು ಆತನ ಪತ್ನಿಯ ಬಂಧಿಸುವ ಸಲುವಾಗಿ ಹಾಗೂ ಪ್ರಕರಣದ ಸೂಕ್ತ ತನಿಖೆ ನಡೆಸುವ ಸಲುವಾಗಿ ಕುಂದಾಪುರ ಸಿಪಿಐ ಗೋಪಿಕೃಷ್ಣ ನೇತೃತ್ವದಲ್ಲಿ ಎರಡು ತಂಡಗಳನ್ನು ರಚನೆ ಮಾಡಲಾಗಿದೆ. ಆರೋಪಿಗಳು ಕುಂದಾಪುರದಿಂದ ತಪ್ಪಿಸಿಕೊಂಡಿದ್ದು ಕಾಸರಗೋಡು ಕಡೆ ತೆರಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ನಿಟ್ಟಿನಲ್ಲಿ ಪೊಲೀಸರ ಒಂದು ತಂಡ ಅಲ್ಲಿಗೆ ತೆರಳಿದ್ದು ಸದ್ಯದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು.

ಶಿಲ್ಪಾ ಅವರು ವಿಷ ಸೇವನೆ ಮಾಡಿದ ಬಳಿಕ ಆಸ್ಪತ್ರೆಗೆ ಸೇರಿದ ವಿಚಾರದ ಪೊಲೀಸರಿಗೆ ತಡವಾಗಿ ತಿಳಿದು ಬಂದಿದ್ದು, ಆಕೆಯ ಸಾವಿನ ನಂತರ ಪ್ರಕರಣ ದಾಖಲಾಗಿದೆ. ಅಝೀಜ್‌ ಮತ್ತು ಶಿಲ್ಪಾ ಪರಸ್ಪರ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ಹೇಳಿ ಮೋಸ ಮಾಡಿದ್ದು, ಅದೇ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಅಝೀಜ್‌ ಮತ್ತು ಸಲ್ಮಾ ಮೇಲೆ ಪ್ರಕರಣ ದಾಖಲಾಗಿದ್ದು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದರು. ಹಾಗೂ ಆರೋಪಿ ಅಝೀಜ್‌ ಈ ಹಿಂದೆ ಬೇರೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಕುರಿತು ಇದುವರೆಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಅದರ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!