ಅವಶ್ಯಕತೆ ಬಿದ್ದರೇ ಕಂಚಿನಡ್ಕ ಚಲೋ- ಯಶ್ಪಾಲ್ ಸುವರ್ಣ

ಉಡುಪಿ: ಕಂಚಿನಡ್ಕ ಮಿಂಚಿನ ಬಾವಿ ಶ್ರೀ ಬಬ್ಬುಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಹಿಂ.ಮೋರ್ಚಾದ ಪ್ರ.ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಮಂಗಳವಾರ ಸಂಜೆ ಭೇಟಿ ನೀಡಿದರು.

ನಂತರ ಮಾತನಾಡಿದ ಅವರು ಪರಿಶಿಷ್ಟ ಜಾತಿ, ಮುಂಡಾಲ ಸಮುದಾಯದವರು ಅನಾದಿ ಕಾಲದಿಂದಲೂ ಶ್ರದ್ಧಾ ಭಕ್ತಿಯಿಂದ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ಶಕ್ತಿಗಳನ್ನು ಆರಾಧಿಸಿಕೊಂಡು ಬರುತ್ತಿದ್ದು ಐತಿಹಾಸಿಕ ಸ್ಥಳವಾಗಿದೆ. ಈ ಕಾರಣೀಕದ ಕ್ಷೇತ್ರಕ್ಕೆ ಭಕ್ತರೊಬ್ಬರು ದಾನದ ರೂಪದಲ್ಲಿ ತಗಡಿನ ಮೇಲ್ಛಾವಣಿ ನೀಡಲು ಮುಂದಾಗ ಅದನ್ನು ಅಡ್ಡಿಪಡಿಸಲು ಎಸ್‌.ಡಿ‌.ಪಿ.ಐ ಪ್ರಾಯೋಜಕತ್ವದ ಮುಸಲ್ಮಾನರು ಯಾರು ಎಂದು ಪ್ರಶ್ನಿಸಿದರು.

ಸರಕಾರಿ ಜಾಗದಲ್ಲಿ ಮೇಲ್ಛಾವಣಿ ಬರುತ್ತದೆ ಎಂದು ಅವರು ದೂರುತ್ತಿದ್ದಾರೆ, ಆದರೆ ಸರಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಕೆಲವು ಮುಸಲ್ಮಾನರು ಮನೆ ನಿರ್ಮಿಸಿಕೊಂಡಿದ್ದಾರೆ ಆ ವಿಚಾರಗಳ ಬಗ್ಗೆಯೂ ತನಿಖೆ ನಡೆಯಲಿ 
ಸಮಸ್ತ ಹಿಂದೂ ಸಮಾಜ ದಲಿತ ಸಮುದಾಯದ ಬೆಂಬಕ್ಕೆ ನಿಲ್ಲುತ್ತದೆ, ಅವಶ್ಯಕತೆ ಬಿದ್ದರೇ ಕಂಚಿನಡ್ಕ ಚಲೋ ಮಾಡಲು ನಾವು ಸಿದ್ದರಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಮುಖರಾದ ಲೋಕೇಶ್ ಪಡುಬಿದ್ರಿ, ದಿನೇಶ್ ಕೋಟ್ಯಾನ್, ಸದಾಶಿವ ಕೋಟ್ಯಾನ್, ವಸಂತ ಪಾದೆಬೆಟ್ಟು, ಸಂತೋಷ್ ನಂಬಿಯಾರ್, ಶಂಕರ್ ನಂಬಿಯರ್, ಸುಜಿತ್ ಕಂಚಿನಡ್ಕ, ಶಂಕರ ಪಾನರ, ಸುವಾಸ್ ಶೆಟ್ಟಿ,, ಗೋವಿಂದ ಕಂಚಿನಡ್ಕ, ರಮೇಶ್ ಕಂಚಿನಡ್ಕ ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ಭೇಟಿ:

ಕಂಚಿನಡ್ಕ ಮಿಂಚಿನ ಬಾವಿ ಶ್ರೀಬಬ್ಬುಸ್ವಾಮಿ ದೇವಸ್ಥಾನಕ್ಕೆ ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ಇವರು ಭೇಟಿ ನೀಡಿ ಪ್ರಸ್ತುತ ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಪಡಿಸಿರುವ ಎಸ್ ಡಿಪಿಐ ಮತೀಯ ಸಂಘಟನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಇಲ್ಲಿ ಪರಿಶಿಷ್ಟ ಜಾತಿ ಮುಂಡಾಲ ಸಮುದಾಯದವರು ಅನಾದಿ ಕಾಲದಿಂದಲೂ ಶ್ರದ್ಧಾ ಭಕ್ತಿಯಿಂದ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ಶಕ್ತಿಗಳನ್ನು ಆರಾಧಿಸಿಕೊಂಡು ಬರುತ್ತಿದ್ದು  ಜಿಲ್ಲೆಯ ಎಲ್ಲಾ ಬಬ್ಬುಸ್ವಾಮಿ ದೈವಸ್ಥಾನಗಳ ಸಹಕಾರದೊಂದಿಗೆ ಈ ಕ್ಷೇತ್ರದ ಅಭಿವೃದ್ಧಿಯನ್ನು ಕೈಗೊಳ್ಳುವ ಬಗ್ಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಕುರಿತು ತಿಳಿಸಿದ ಅವರು ಈಗಾಗಲೇ ಹಿಂದೂ ಸಂಘಟನೆಯವರೂ ಕೂಡಾ ದೈವಸ್ಥಾನದ ಅಭಿವೃದ್ಧಿಯಲ್ಲಿ ಕೈಜೋಡಿಸಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಲೋಕೇಶ್ ಕಂಚಿನಡ್ಕ, ಸದಾಶಿವ ಕಂಚಿನಡ್ಕ, ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸದಾನಂದ ಆರ್ ಕೈಪುಂಜಾಲು, ಸತೀಶ್ ಕಪ್ಪೆಟ್ಟು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!