ಕಡಿಯಾಳಿ: ಸುತ್ತುಪೌಳಿ, ತಿರುಗುವ ಮುಚ್ಚಿಗೆ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ

ಉಡುಪಿ ಜೂ.1 (ಉಡುಪಿ ಟೈಮ್ಸ್ ವರದಿ): ಜೀರ್ಣೋದ್ಧಾರಗೊಂಡಿರುವ ಉಡುಪಿ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಹಿತ ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದ (ಜೂ.1)ಜೂ.10 ರ ವರೆಗೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಇಂದು ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು  ದೇವಸ್ಥಾನದ ಸುತ್ತುಪೌಳಿಯನ್ನು ಲೋಕಾರ್ಪಣೆಗೊಳಿಸಿದರು. ಹಾಗೂ ದೇವಸ್ಥಾನದಲ್ಲಿ ಅಳವಡಿಸಿರುವ ತಿರುಗುವ ಮುಚ್ಚಿಗೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ, ಕಂದಾಯ ಸಚಿವರಾದ ಆರ್.ಅಶೋಕ್, ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ. ಕಾರಜೋಳ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಮತ್ತು ದೇವಸ್ಥಾನದ ಆಡಳಿತ ಮಂಡಳಿಯವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!