ಜೂ.3 ರಿಂದ ರಾಜ್ಯಾದ್ಯಂತ ಭಾರೀ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಜೂ.3 : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದ್ದು, ಇಂದಿನಿಂದ 4 ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇಂದು ರಾಜ್ಯಾದ್ಯಂತ ಮಳೆಯ ಜೊತೆಗೆ ಗುಡುಗು, ಸಿಡಿಲು ಮಿಂಚಿನ ಎಚ್ಚರಿಕೆಯನ್ನೂ ಇಲಾಖೆ ನೀಡಿದ್ದು, ಮುಂದಿನ 4 ದಿನಗಳವರೆಗೆ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ. ಮುಂಗಾರು ಆಗಮನದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲೂ ಧಾರಾಕಾರ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೂ ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!