ಕೋವಿಡ್ ಸಂಕಷ್ಟ ಕಾಲದಲ್ಲಿ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ ಸುದೀಪ್!

ಬೆಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್,  ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ.

ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಸುದೀಪ್  ಅವರನ್ನು ಹೃದಯ ಪೂರ್ವಕವಾಗಿ ಅಭಿನಂದಿಸುವುದಾಗಿ ಸಚಿವ ಸುಧಾಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!