ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ- ಸಿದ್ದರಾಮಯ್ಯ

ಬೆಂಗಳೂರು: ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ವಾಗ್ಯುದ್ದ ಮತ್ತೆ ಮುಂದುವರೆದಿದೆ. ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ ಎಂಬ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್ ಅವರಿಗೆ ಟ್ವೀಟ್ ಮಾಡುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. 

ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ ಎಂದು ಸಚಿವ ಬಿ. ಸಿ. ನಾಗೇಶ್ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಸಚಿವರು ಬಹಿರಂಗಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪರಿಷ್ಕೃತ ಪಠ್ಯಜಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ. ಇವರನ್ನು ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮಿಯರಲ್ಲ, ಹಿಂದೂಗಳೇ ಅಲ್ವಾ ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!