ಪ್ರವಾದಿ ಮುಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ: ಬಿಜೆಪಿಯಿಂದ ನೂಪುರ್ ಶರ್ಮಾ ಅಮಾನತು

ನವದೆಹಲಿ: ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ ಅಮಾನತುಗೊಳಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅಲ್ಲದೆ ದೆಹಲಿ ಬಿಜೆಪಿ ಮಾಧ್ಯಮ ಮುಖ್ಯಸ್ಥ ನವೀನ್ ಜಿಂದಾಲ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿನ ಅವರ ಅಭಿಪ್ರಾಯಗಳು ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತವೆ ಮತ್ತು ಪಕ್ಷದ ಮೂಲಭೂತ ನಂಬಿಕೆಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ. ನಿಮ್ಮ ಪ್ರಾಥಮಿಕ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ ಮತ್ತು ನಿಮ್ಮನ್ನು ಪಕ್ಷದಿಂದ ಹೊರಹಾಕಲಾಗಿದೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಅವರು ನವೀನ್ ಜಿಂದಾಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ಯಾವುದೇ ಧಾರ್ಮಿಕ ವ್ಯಕ್ತಿಗಳ ಅವಮಾನವನ್ನು ಬಲವಾಗಿ ಖಂಡಿಸುತ್ತದೆ” ಎಂದು ಹೇಳಿದ ನಂತರ ಬಿಜೆಪಿ ನೂಪುರ್ ಶರ್ಮಾ ಅವರನ್ನು ರಾಷ್ಟ್ರೀಯ ವಕ್ತಾರೆ ಹುದ್ದೆಯಿಂದ ಮತ್ತು ಪಕ್ಷದ ಪ್ರಾಥಮಿತ ಸದಸ್ಯತ್ವದಿಂದ ಅಮಾನತುಗೊಳಿಸಿದೆ.

ಇದಕ್ಕು ಮುನ್ನ, ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ ಪ್ರತಿಯೊಂದು ಧರ್ಮವೂ ಅರಳಿದೆ ಮತ್ತು ಪ್ರವರ್ಧಮಾನಕ್ಕೆ ಬಂದಿದೆ. ಭಾರತೀಯ ಜನತಾ ಪಕ್ಷವು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿತ್ತು.

Leave a Reply

Your email address will not be published. Required fields are marked *

error: Content is protected !!