ಕುಂದಾಪುರ: ನಿಂತಿದ್ದ ಟಿಪ್ಪರ್’ಗೆ ಸ್ಕೂಟರ್ ಡಿಕ್ಕಿ-ಸವಾರ ಮೃತ್ಯು,

ಕುಂದಾಪುರ ಜೂ.6: ಕೆಟ್ಟು ನಿಂತಿದ್ದ ಟಿಪ್ಪರ್ ವಾಹನಕ್ಕೆ ಸ್ಕೂಟರ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಸಮೀಪ ನಿನ್ನೆ ತಡರಾತ್ರಿ ನಡೆದಿದೆ.

ಕಂಬದಕೋಣೆ ಗ್ರಾಮದ ಹಳಗೇರಿ ತೆಂಕಬೆಟ್ಟಿನ ನಿವಾಸಿ ಸತೀಶ್ ಜೋಗಿ (42) ಮೃತಪಟ್ಟವರು. ಘಟನೆಯಲ್ಲಿ ಹಿಂಬದಿ ಸವಾರ ಆಕಾಶ್ ಜೋಗಿ (17) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡ ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!