ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಝ್ ಮುಷರಫ್ ಆರೋಗ್ಯ ಸ್ಥಿತಿ ಗಂಭೀರ
ದುಬೈ ಜೂ.10: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಝ್ ಮುಷರಫ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.
ಈ ಬಗ್ಗೆ ಪರ್ವೇಜ್ ಪರ್ವೇಝ್ ಅವರ ಅಧಿಕೃತ ಟ್ವಿಟರ್ ಅಕೌಂಟ್ ಮೂಲಕ ಟ್ವಿಟ್ ಮಾಡಿ ಮಾಹಿತಿ ನೀಡಲಾಗಿದ್ದು, “ಅವರು ವೆಂಟಿಲೇಟರ್‌ನಲ್ಲಿಲ್ಲ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಕಳೆದ 3 ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೇತರಿಕೆ ಸಾಧ್ಯವಾಗದ ಮತ್ತು ಅಂಗಾಂಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕಠಿಣ ಹಂತವನ್ನು ಎದುರಿಸುತ್ತಿದ್ದಾರೆ. ಅವರ ದೈನಂದಿನ ಜೀವನವು ಸುಲಭವಾಗಲಿ ಎಂದು ಪ್ರಾರ್ಥಿಸಿ,”ಎಂದು ತಿಳಿಸಿದ್ದಾರೆ.
ಪರ್ವೇಝ್ ಮುಷರಫ್ ಅವರು ಶುಕ್ರವಾರ ನಿಧನರಾಗಿದ್ದಾರೆಂದು ಕೆಲವು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದು, ಇದು ಗೊಂದಲವನ್ನು ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಮುಷರಫ್ ಅವರ ಕುಟುಂಬ ಮೂಲಗಳು ಈ ಟ್ವಿಟ್ ಮಾಡಿದೆ.