ಹೀರಾಬೆನ್’ಗೆ ನೂರರ ಸಂಭ್ರಮ: ತಾಯಿ ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ
ಗುಜರಾತ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಶನಿವಾರ 100ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲಲಿ ಗುಜರಾತ್ ಪ್ರವಾಸದಲ್ಲಿರುವ ಮೋದಿಯವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ.
ತಾಯಿಯ ಹುಟ್ಟುಹಬ್ಬದಂದು ಆಶೀರ್ವಾದ ಪಡೆಯುವ ಸಲುವಾಗಿ ಹಾಗೂ ಅನೇಕ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಇಂದು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
ಅಷ್ಟೇ ಅಲ್ಲದೆ, ಅಮ್ಮನ ಜನ್ಮದಿನಕ್ಕೆ ಮೋದಿ ಉಡುಗೊರೆ ಕೂಡ ನೀಡಿದ್ದಾರೆಂದು ತಿಳಿದು ಬಂದಿದೆ. ಜೊತೆಗೆ ವಡಾನಗರದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.