ದೆಹಲಿ: ಪೊಲೀಸ್ ಮುಖಕ್ಕೆ ಉಗುಳಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ- ವಿಡಿಯೋ ವೈರಲ್
ನವದೆಹಲಿ ಜೂ.22 : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಲ್ಲಿ ದೆಹಲಿಯಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜ ಪ್ರತಿಭಟನಾ ಸ್ಥಳದಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಅವರ ಮುಖಕ್ಕೆ ಉಗುಳಿರುವ ವಿಡಿಯೋವೊಂದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿದೆ.
ಇದೀಗ ನೆಟ್ಟಾ ಡಿಸೋಜ ಅವರು ಪೊಲೀಸರ ಮುಖಕ್ಕೆ ಉಗಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಕಾಂಗ್ರೆಸ್ ನ್ನು ಟೀಕಿಸಿರುವ ಬಿಜೆಪಿ “ಅಸ್ಸಾಂನಲ್ಲಿ ಪೊಲೀಸರನ್ನು ಥಳಿಸಿದ ನಂತರ, ಹೈದರಾಬಾದ್ ನಲ್ಲಿ ಪೊಲೀಸರ ಕಾಲರ್ ಹಿಡಿದುಕೊಂಡು ಗಲಾಟೆ ಮಾಡಿದ್ದ ಕಾಂಗ್ರೆಸ್ ನಾಯಕರು ಇದೀಗ ಪೊಲೀಸರ ಮುಖಕ್ಕೆ ಉಗುಳಿದ್ದಾರೆ. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಪೊಲೀಸರು ಮತ್ತು ಮಹಿಳಾ ಭದ್ರತೆಯ ಸಿಬ್ಬಂದಿ ಮೇಲೆ ಉಗುಳಿದ್ದಾರೆ. ಇದು ತೀವ್ರ ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ ನವರಿಗೆ ಮರ್ಯಾದೆಯೇ ಇಲ್ಲ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ವಕ್ತಾರ ಶೆಹಜಾದ್ ಪೊನ್ನವಲ್ಲ ಟ್ವಿಟ್ ಮಾಡಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿ “ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವಾಗ, ಪ್ರತಿಭಟನಾಕಾರರಲ್ಲಿ ಒಬ್ಬರಾದ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಅವರು ಕರ್ತವ್ಯದಲ್ಲಿದ್ದ ಪೆÇಲೀಸ್ ಸಿಬ್ಬಂದಿಯನ್ನು ಅಡ್ಡಿಪಡಿಸಿದರು. ಪೆÇಲೀಸರ ಮೇಲೆ ಹಲ್ಲೆಯನ್ನೂ ಮಾಡಿ, ಅವರ ಮೇಲೆ ಉಗುಳಿದರು. ಇದಕ್ಕಾಗಿ ಕಾನೂನಿನ ಸೂಕ್ತ ಸೆಕ್ಷನ್ ಗಳ ಅಡಿಯಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ “ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.