ನನಗೆ ತುಂಬಾ ಸುಸ್ತಾಗಿದೆ ಎಂದು ಶೇ.20ರಷ್ಟು ಪ್ರಶ್ನೆಗಳಿಗೆ ಉತ್ತರಿಸದ ರಾಹುಲ್ ಗಾಂಧಿ

ನವದೆಹಲಿ, ಜೂ 24: ನನಗೆ ತುಂಬಾ ಸುಸ್ತಾಗಿದೆ ಎಂದ ರಾಹುಲ್ ಗಾಂಧಿಯವರು ಜಾರಿ ನಿರ್ದೇಶನಾಲಯ ಅಧಿಕಾರಿಗಳ ಶೇ. 20ರಷ್ಟು ಪ್ರಶ್ನೆಗಳಿಗೆ ಉತ್ತರಿಸಲೇ ಇಲ್ಲ ಎಂದು ವರದಿಯಾಗಿದೆ.

ನ್ಯಾಷನಲ್ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸತತ ಐದು ದಿನಗಳ ಕಾಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸುದೀರ್ಘ ವಿಚಾರಣೆಗೊಳಪಡಿಸಿತ್ತು. ನಿರಂತರ ವಿಚಾರಣೆ ಎದುರಿಸಿದ್ದ ರಾಹುಲ್ ಗಾಂಧಿಯವರು ಇಡಿ ಅಧಿಕಾರಿಗಳ ಶೇ. 20ರಷ್ಟುಪ್ರಶ್ನೆಗಳಿಗೆ ಉತ್ತರಿಸಲೇ ಇಲ್ಲ ಎಂಬ ಅಂಶವನ್ನು ಇಡಿ ಮೂಲಗಳು ಬಹಿರಂಗಪಡಿಸಿರುವ ಬಗ್ಗೆ ವರದಿಯಾಗಿದೆ. ನನಗೆ ತುಂಬಾ ಸುಸಸ್ತಾಗಿದೆ. ಇನ್ನು ಉತ್ತರಿಸುವುದು ನನ್ನಿಂದ ಸಾಧ್ಯವಿಲ್ಲ ಎಂಬುದಾಗಿ ರಾಹುಲ್ ಗಾಂಧಿಯವರು ಇಡಿ ಅಧಿಕಾರಿಗಳ ಮುಂದೆ ಹೇಳಿಕೊಂಡಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!