ರಾಜ್ ಠಾಕ್ರೆಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಶಿವಸೇನೆ ನಾಯಕ ಶಿಂದೆ
ಮುಂಬೈ ಜೂ.27: ದಿನಕಳೆಯುತ್ತಿದ್ದಂತೆಯೇ ಕುತೂಹಲ ಹೆಚ್ಚಿಸುತ್ತಿರುವ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಬೆನ್ನಲ್ಲೇ ಶಿವಸೇನೆ ನಾಯಕ ಏಕನಾಥ್ ಶಿಂದೆ ಅವರು, ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರೊಂದಿಗೆ ಎರಡು ಬಾರಿ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎಂಬ ವಿಚಾರ ಬಾರೀ ಕುತೂಹಲ ಉಂಟುಮಾಡಿದೆ.
ರಾಜ್ ಠಾಕ್ರೆ ಅವರೊಂದಿಗೆ ಮಾತನಾಡಿರುವ ಏಕನಾಥ್ ಶಿಂದೆ ಅವರು ಮಹಾರಾಷ್ಟ್ರದ ಇತ್ತೀಚಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಮಾತುಕತೆ ನಡೆಸಿದ್ದು, ಇದೇ ವೇಳೆ, ಅವರ ಆರೋಗ್ಯದ ಬಗ್ಗೆಯೂ ವಿಚಾರಿಸಿದ್ದಾರೆ ಎಂದು ಎಂಎನ್ಎಸ್ ನಾಯಕರೊಬ್ಬರು ಸುದ್ದಿಸಂಸ್ಥೆಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ನಡುವೆ ಬಂಡಾಯವೆದ್ದಿರುವ ನಾಯಕರ ವಿರುದ್ಧ ಶಿವಸೇನೆ, ಎನ್ಸಿಪಿ, ಕಾಂಗ್ರೆಸ್ ಕ್ರಮ ಕೈಗೊಳ್ಳಲು ಮುಂದಾಗಿದೆ ಹಾಗೂ ಮೂರು ಪಕ್ಷಗಳು ಬಂಡಾಯ ಶಾಸಕರನ್ನು ಅನರ್ಹತೆ ಮಾಡುವುದು ಮತ್ತು ಪಕ್ಷದಿಂದ ಅಮಾನತು ಮಾಡಲು ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.