ವಿಟ್ಲ: ಮಹಿಳೆಗೆ ಇರಿದು ಬರ್ಭರ ಹತ್ಯೆ
ವಿಟ್ಲ ಜೂ.27 (ಉಡುಪಿ ಟೈಮ್ಸ್ ವರದಿ): ವಿಟ್ಲ ಸಮೀಪದ ಮಾಣಿ ನೇರಳಕಟ್ಟೆ ಎಂಬಲ್ಲಿ ಮಹಿಳೆಯೊಬ್ಬರಿಗೆ ಆಟೋದಲ್ಲಿ ಬಂದ ತಂಡವೊಂದು ಚೂರಿಯಿಂದ ಇರಿದು ಕೊಲೆ ಮಾಡಿ ಪರಾರಿಯಾದ ಘಟನೆ ಇಂದು ಸಂಜೆ ನಡೆದಿದೆ.
ಅನಂತಾಡಿಯ ದೇವಿ ನಗರ ನಿವಾಸಿ ಶಕುಂತಾಳ (35) ಕೊಲೆಯಾದವರು. ಶಕುಂತಾಳ ಅವರು ಪುತ್ತೂರು ಕಡೆಯಿಂದ ಮಾಣಿ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲಿ ಬಂದ ತಂಡ ಅವರಿಗೆ ಚೂರಿಯಿಂದ ದಾಳಿ ನಡೆಸಿದೆ. ಗಂಭೀರ ಗಾಯಗೊಂಡಿದ್ದ ಶಕುಂತಾಳ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಶಕುಂತಾಳ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಚೂರಿ ಇರಿತಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.