ಉಡುಪಿ: 74ನೇ ಸ್ವಾತಂತ್ರೋತ್ಸವದ ಸರಳ ಆಚರಣೆ
ಉಡುಪಿ – (ಉಡುಪಿ ಟೈಮ್ಸ್ ವರದಿ): 74 ನೇ ಸ್ವಾತಂತ್ರೋತ್ಸವದ ಆಚರಣೆಯು ಕೊರೋನಾ ಸೋಂಕಿನ ಭೀತಿಯ ನಡುವೆ ನಗರದ ಅಜ್ಜರಕಾಡು ಮೈದಾನದಲ್ಲಿ ಸರಳವಾಗಿ ನಡೆಯಿತು.
ಸರಕಾರದ ಆದೇಶದಂತೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಧ್ವಜರೋಹಣ ನಡೆಸಿಕೊಟ್ಟರು. ಸಾರ್ವಜನಿಕರಿಗೆ ಭಾಗವಹಿಸುವ ನಿರಾಕರಣೆ ಇದ್ದ ಕಾರಣ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಮಾಡಲು ಅವಕಾಶ ನೀಡಲಾಯಿತು. ಇದೆ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್ ಗಳಾಗಿ ದುಡಿಯುತ್ತಿರುವ ವೈದ್ಯರು, ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್ , ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ , ಕರಾವಳಿ ಕಾವಲು ಪಡೆ ಎಸ್ಪಿ ಚೇತನ್, ಸಿಇಒ ಪ್ರೀತಿ , ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ , ಉಡುಪಿ ನಗರ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಮತ್ತಿತರರು ಉಪಸ್ಥಿತರಿದ್ದರು.