ಕೊರೊನಾದಿಂದ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ನಡೆಸಿ: ಸರ್ಕಾರಕ್ಕೆ ಡಿಕೆಶಿ ಸಲಹೆ

ಬೆಂಗಳೂರು:  ಕೊರೊನಾದಿಂದ ಸಾವಿರಾರು ಮಕ್ಕಳು ಶಾಲೆ ಬಿಟ್ಟಿದ್ದು, ಇಂತಹ ಮಕ್ಕಳ ಸಮೀಕ್ಷೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಹಳ್ಳ ಹಿಡಿಸಿರುವ ಹಾಗೂ ಸಂಕಷ್ಟದಲ್ಲಿರುವ ಶಿಕ್ಷಕರಿಗೆ ನೆರವಾಗಲು ಯೋಜನೆ ರೂಪಿಸಿಸಲು ಸರ್ಕಾರ ವಿಫಲವಾಗಿದೆ ಎಂದು ಖಂಡಿಸಿರುವ ಶಿವಕುಮಾರ್, ಹಳಿತಪ್ಪಿರುವ ಶಿಕ್ಷಣ ವ್ಯವಸ್ಥೆಯನ್ನು ಮತ್ತೆ ಸರಿದಾರಿಗೆ ತರಲು ಕೆಪಿಸಿಸಿ ಅಧ್ಯಕ್ಷ ಸರ್ಕಾರಕ್ಕೆ ಸಲಹೆಯನ್ನೂ ನೀಡಿದ್ದಾರೆ.

ಮಧ್ಯಾಹ್ನದ ಬಿಸಿಯೂಟವನ್ನು ವಿದ್ಯಾರ್ಥಿಗಳ ಮನೆಗಳಿಗೆ ನೇರವಾಗಿ ತಲುಪಿಸುವ ವ್ಯವಸ್ಥೆ ಮಾಡುವ ಮೂಲಕ ಮಕ್ಕಳ ಪೌಷ್ಟಿಕತೆ ಕಾಪಾಡಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ದುಡಿಯುತ್ತಿರುವವರಿಗೆ ಆರ್ಥಿಕ ಪರಿಹಾರ ಪ್ಯಾಕೇಜ್ ಘೋಷಿಸಬೇಕು. ಕೊರೊನಾ ಹೋರಾಟದಲ್ಲಿ ಮೃತಪಟ್ಟಿರುವ ಶಿಕ್ಷಕರಿಗೆ ಪರಿಹಾರ ನೀಡಬೇಕು. ಬಡ್ಡಿ ರಹಿತ ಸಾಲ ನೀಡುವ ಮೂಲಕ ಶಾಲೆಗಳ ಆರ್ಥಿಕ ಸಾಮರ್ಥ್ಯ ಹೆಚ್ಚಿಸಬೇಕು. ಖಾಸಗಿ ಶಾಲೆಗಳಿಗೆ ತೆರಿಗೆ ವಿನಾಯಿತಿ ನೀಡುವ ಮೂಲಕ ಖಾಸಗಿ ಶಾಲೆಗಳಲ್ಲಿ ಮಕ್ಕಳ ಹೆಚ್ಚಿನ ಶುಲ್ಕ ವಸೂಲಾತಿಗೆ ಕಡಿವಾಣ ಹಾಕಬೇಕು. ಆದ್ಯತೆ ಮೇರೆಗೆ ತಂತ್ರಜ್ಞಾನ ಬಳಸಿಕೊಳ್ಳುವ ಅಂತರ ಕಡಿಮೆಗೊಳಿಸಬೇಕು ಎಂದಿದ್ದಾರೆ.

error: Content is protected !!