ಕುಂದಾಪುರಕ್ಕೆ ಅಪ್ಪಳಿಸಿದ ಕೊರೋನಾ ಸುನಾಮಿ, ಒಂದೇ ದಿನ 150 ಪಾಸಿಟಿವ್!
ಉಡುಪಿ: (ಉಡುಪಿ ಟೈಮ್ಸ್ ವರದಿ) ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಕೊರೋನಾ ಸೋಂಕಿತರ ಸಂಖ್ಯೆ ಇಂದು ಉಡುಪಿಯಲ್ಲಿ ದೃಢವಾಗಿದೆ. ಇಂದು ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 150 ಜನರಿಗೆ ಸೋಂಕು ದೃಢವಾಗಿದ್ದು ಗ್ರೀನ್ ಝೋನ್ ಜಿಲ್ಲೆಯಾಗಿದ್ದ ಉಡುಪಿಯಲ್ಲಿ ಸಮುದಾಯ ಹಂತಕ್ಕೆ ಕೊರೋನಾ ಹಬ್ಬುವ ಲಕ್ಷಣ ಬಹುತೇಕ ಖಚಿತವಾಗುತ್ತಿದೆ.
ಇಂದೂ ಕೂಡ ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲೇ ಹೆಚ್ಚಿನ ಸೋಂಕು ಪಾಸಿಟಿವ್ ಆಗಿ ಬಂದಿದೆ. ಆದ್ದರಿಂದ ತಕ್ಷಣ ಮಹಾರಾಷ್ಟ್ರದಿಂದ ಬಂದ ಹೋಂ ಕ್ವಾರಂಟೈನ್‌ನಲ್ಲಿರು ಮೇಲೆ ತೀವ್ರ ನಿಗಾವಹಿಸ ಬೇಕಾಗಿದೆಂದು ಜನರು ಆಗ್ರಹಿಸುತ್ತಿದ್ದಾರೆ.
ಆರೋಗ್ಯ ಇಲಾಖೆ ಮೂಲಗಳ ಪ್ರಕಾರ, ಕುಂದಾಪುರ ತಾಲೂಕಿನಿಂದಲೇ 128 ಪ್ರಕರಣಗಳು ವರದಿಯಾಗಿದ್ದು, ಉಳಿದವು ಉಡುಪಿ ಮತ್ತು ಕಾರ್ಕಳ ತಾಲೂಕುಗಳಿಗೆ ಸೇರಿವೆ, ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ರಾಜ್ಯದಲ್ಲಿಯೇ ಅತಿ ಹೆಚ್ಚು ಎಂಬಂತೆ 500ರ ಗಡಿಯತ್ತ ಸಾಗಿದೆ.
ಮಹಾರಾಷ್ಟ್ರದಿಂದ ಹೆಚ್ಚಿನ ಸಂಖ್ಯೆಯ ವಲಸಿಗ ಕಾರ್ಮಿಕರ ಆಗಮನ ಹಾಗೂ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ನಡೆಸುತ್ತಿರುವುದರಿಂದ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಜಿಲ್ಲೆಯಲ್ಲಿ ವಿಶೇಷವಾಗಿ ಕುಂದಾಪುರದಲ್ಲಿನ ಕಳಪೆ ಕ್ವಾರಂಟೈನ್ ವ್ಯವಸ್ಥೆಯೂ ಇದಕ್ಕೆ ಕಾರಣವಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಕೆಲ ಕ್ವಾರಂಟೈನ್ ಕೇಂದ್ರಗಳಲ್ಲಿ ನಾಲ್ಕು ಸೋಂಕಿತರನ್ನು ಒಂದೇ ಕೊಠಡಿಗಳಲ್ಲಿ ಇರಿಸಲಾಗುತ್ತಿದೆ. ಅಧಿಕಾರಿಗಳ ಅಸಮರ್ಪಕ ನಿರ್ವಹಣೆಯಿಂದಾಗಿ ಸಾಮಾಜಿಕ ಅಂತರ ನಿಯಮವನ್ನು ಅನುಸರಿಸುತ್ತಿಲ್ಲ ಎಂದು ಕೆಲವರು ಹೇಳುತ್ತಾರೆ.
ಜಿಲ್ಲೆಯಲ್ಲಿ ಈವರೆಗೆ 260 ಕೋವಿಡ್ -19 ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದಿನ 150 ಹೊಸ ಪ್ರಕರಣದಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 410 ಕ್ಕೆ ಏರಿಕೆ ಕಂಡಿದೆ.
ಉಡುಪಿ ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ಸುನಾಮಿ ವೇಗದಲ್ಲಿ ಏರಿಕೆಯಾಗುತ್ತಿದೆ ಇದು ಸಮುದಾಯ ಹಂತ ತಲುಪದಂತೆ ತಕ್ಷಣ ಸರಕಾರ ಕಾರ್ಯಪ್ರವೃತ್ತವಾಗಬೇಕಿದೆ.
ಸದ್ಯ ಕಂಡು ಬರುತ್ತಿರುವ ಸೋಂಕಿತರ ಪೈಕಿ ಬಹಳಷ್ಟು ಮಂದಿ ಕ್ವಾರಂಟೈನ್ ಮುಗಿಸಿ ಮನೆಗೆ ಹೋದವರಿಂದ ಪತ್ತೆಯಾಗಿದೆ. ಮನೆಗೆ ಬಂದವರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಇವರ ಸಂಪರ್ಕಕ್ಕೆ ಬಂದ ಮನೆಯವರಿಗೆ, ನೆರೆ ಮನೆಯವರಿಗೆ ಸೋಂಕು ತಗಲುವ ಸಾಧ್ಯತೆ ಬಹುತೇಕ ಇರುವುದರಿಂದ ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರದಿಂದ ಬಂದವರಿಗೆ 7 ದಿನ ಸಾಂಸ್ಥಿಕ ಕ್ವಾರೆಂಟೈನ್ ಹಾಗೂ 14 ದಿನ ಗೃಹ ಕ್ವಾರೆಂಟೈನ್ ವಿಧಿಸಲು ಚಿಂತಿಸಲಾಗಿದೆ. ಉಳಿದ ರಾಜ್ಯದಿಂದ ಬರುವವರಿಗೆ ಕ್ವಾರೆಂಟೈನ್ ಬಗ್ಗೆಯೂ ಚರ್ಚಿಸಲಾಗಿದ್ದು ಶೀಘ್ರವೇ ಮಾರ್ಗಸೂಚಿ ಹೊರಬೀಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಧ್ಯಮಕ್ಕೆ ತಿಳಿಸಿದರು.
Whts wrong with the government
Allowing other state people to come and giving poison to normal people here..
Covid 19, spreading day by day, Some mischievous people who are going in the roadside, & also going by Two wealers, Cars and other vehicles travelling people are not wearing the mask or face cover in public places. They should be taught the sequence of Covid 19 strictly.