ಉಡುಪಿ: ನೂತನ ಎಸ್ಪಿಯಾಗಿ ವಿಷ್ಣುವರ್ಧನ್ ಅಧಿಕಾರ ಸ್ವೀಕರ
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎನ್. ವಿಷ್ಣುವರ್ಧನ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಬನ್ನಂಜೆಯ ಎಸ್ಪಿ ಕಚೇರಿಯಲ್ಲಿ ಎಎಸ್ಪಿ ಕುಮಾರಚಂದ್ರ ಅಧಿಕಾರ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ವಿಷ್ಣುವರ್ಧನ್ ಅವರು, ‘ಜಿಲ್ಲೆಯ ಅನುಭವಸ್ಥ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಯೋಜನೆ ಹಾಕಿಕೊಳ್ಳಲಾಗುವುದು. ಅದಕ್ಕೆ ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ. ಉಡುಪಿ ಒಳ್ಳೆಯ ಜಿಲ್ಲೆ. ಇಲ್ಲಿನ ಜನರು ಕೂಡ ಒಳ್ಳೆಯವರು. ಅದೇ ರೀತಿ ಸಂಸ್ಕೃತಿ ಕೂಡ ವಿಶಿಷ್ಟವಾದುದು’ ಎಂದರು. ಬೆಂಗಳೂರು ದೇವನಹಳ್ಳಿಯ ನಿವಾಸಿಯಾಗಿರುವ ಇವರು, ಬೆಂಗಳೂರಿನ ಸೇಂಟ್ ಜೋಸೆಫ್
ಕಾಲೇಜಿನಿಂದ ಎಂಬಿಎ ಪದವಿ ಪಡೆದಿದ್ದಾರೆ.
2005ರಲ್ಲಿ ಪೊಲೀಸ್ ಸೇವೆಗೆ ಸೇರ್ಪಡೆ ಗೊಂಡಿದ್ದು, ವಿರಾಜಪೇಟೆಯಲ್ಲಿ ಡಿವೈಎಸ್ಪಿಯಾಗಿ ಸೇವೆ ಆರಂಭಿಸಿದರು. ನಂತರ ಮೈಸೂರು ನಗರ ಡಿವೈಎಸ್ಪಿ, ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ, ಶಿವಮೊಗ್ಗ ಹೆಚ್ಚುವರಿ ಎಸ್ಪಿ, ಕಾರ್ಕಳ ಎಎನ್‌ಎಫ್ ಹಾಗೂ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ, ಬೆಂಗಳೂರು ನಾಗರಿಕ ಹಕ್ಕು ನಿರ್ದೇಶನಾಲಯ ಹೆಚ್ಚುವರಿ ಎಸ್ಪಿ, ಮಂಗಳೂರು ಹೆಚ್ಚುವರಿ ಎಸ್ಪಿ, ಮೈಸೂರು ಡಿಸಿಪಿ, ಬೆಂಗಳೂರು ನಗರ ಡಿಸಿಪಿ(ಆಡಳಿತ)ಯಾಗಿ ಕರ್ತವ್ಯ ನಿರ್ವಹಿಸಿದ್ದರು
.