ಉಡುಪಿ:ವಿಶ್ವಕರ್ಮ ಜಯಂತಿ ಆಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಜಿ.ಜಗದೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ, ವಿಶ್ವಕರ್ಮ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುರುಳಿಧರ್, ಉಡುಪಿ ಶಾರದ ಕಲ್ಯಾಣ ಮಂಟಪ ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಸದಸ್ಯರು, ಉಡುಪಿ ನಗರ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರ್ ಮಂಜುನಾಥ್ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!