ಉಡುಪಿ: ಫೆ.1ರಂದು ಮಹಿಳಾ ಹಸಿಮೀನು ಮಾರಾಟಗಾರರ ಸಂಘದ ದಶಮಾನೋತ್ಸವ

ಉಡುಪಿ: ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘ ಇದರ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ಬೃಹತ್ ಮಹಿಳಾ ಮೀನುಗಾರರ ಸಮಾವೇಶ ಹಾಗೂ ಹಿರಿಯ ಮಹಿಳಾ ಮೀನುಗಾರರಿಗೆ ಸನ್ಮಾನ, ಸಾಂಸ್ಕ್ಕೃತಿಕ ವೈಭವ ಕಾರ್ಯಕ್ರಮ ಫೆಬ್ರವರಿ. 1 ರಂದು ಬೆಳಗ್ಗೆ 10 ರಿಂದ ಸಂಜೆ 5 ರತನಕ ಉಡುಪಿ ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಲಿದೆ.


ಬೆಳಗ್ಗೆ ಕರ್ನಾಟಕ ಸರಕಾರದ ಮುಜರಾಯಿ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿರುವರು. ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್.ಸಾಲ್ಯಾನ್ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು.
ಉಡುಪಿ,ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಡಾ.ಜಿ.ಶಂಕರ್, ಉಡುಪಿ ಶಾಸಕ ಕೆ. ರಘುಪತಿ ಭಟ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದ.ಕ. ಮತ್ತು ಉಡುಪಿ ಜಿಲ್ಲಾ ಮೀನುಮಾರಾಟ ಫೇಡರೇಶನ್ ಅಧ್ಯಕ್ಷ ಯಶ್‌ಪಾಲ್ ಎ.ಸುವರ್ಣ, ದಕ್ಷಿಣ ಕನ್ನಡ ಮೋಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಕೋಟದ ಉದ್ಯಮಿ ಆನಂದ್ ಸಿ.ಕುಂದರ್,

ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಜಿ.ಸುವರ್ಣ, ಮಲ್ಪೆ ಮೀನುವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್, ಮಲ್ಪೆಯ ಉದ್ಯಮಿ ಆನಂದ್ ಪಿ.ಸುವರ್ಣ, ಉಡುಪಿಯ ಉದ್ಯಮಿ ಭುವನೇಂದ್ರ ಕಿದಿಯೂರು, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ಶಿವರಾಮ ಕೆ.ಎಂ, ಕುಂದಾಪುರ ಜೈ ಕರ್ನಾಟಕ ಚಿಲ್ಲರೆ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷೆ ರತ್ನ ಮೊಗವೀರ, ಮಂಗಳೂರು ಹಸಿಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಅಹಲ್ಯ ಕಾಂಚನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.


ಈ ಸಂದರ್ಭ 70 ವರ್ಷ ಮೇಲ್ಪಟ್ಟು ಮೀನುವ್ಯಾಪಾರ ನಿರತರಾಗಿರುವ 15 ಮಂದಿ ಹಿರಿಯ ಮಹಿಳಾ ಮೀನುಗಾರರನ್ನು ಸನ್ಮಾನಿಸಲಾಗುವುದು. ಸಭಾಕಾರ್ಯದ ಬಳಿಕ ವಿವಿಧ ಮಾರುಕಟ್ಟೆಗಳ ಮಹಿಳಾ ಮೀನುಗಾರರಿಂದ ಸಂಗೀತ, ನೃತ್ಯ ಕಾರ್ಯಕ್ರಮ ಹಾಗೂ ಬಲೆ ತೆಲಿಪಾಲೆ ಖ್ಯಾತಿಯ ಉಮೇಶ್ ಮಿಜಾರ್ ಮತ್ತು ತಂಡದಿಂದ ‘ತೆಲಿಕೆದ ಗೊಂಚಿಲ್’ ಹಾಸ್ಯ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಆನಂದ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!