ಮುಖ್ಯಮಂತ್ರಿಯಿಂದ ಪರ್ಯಾಯ ಪುರಪ್ರವೇಶ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ: ಜನವರಿ 18 ರಂದು ನಡೆಯಲಿರುವ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಜ. 8 ಅದಮಾರು ಶ್ರೀಗಳ ಪುರ ಪ್ರವೇಶದ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಉಡುಪಿ ಶಾಸಕರಾದ ಕೆ. ರಘುಪತಿ ಭಟ್ ಇವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಈ ಆಮಂತ್ರಣವನ್ನು ಅನಾವರಣಗೊಳಿಸಲಾಯಿತು. ಸಂದರ್ಭ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಮೀನುಗಾರ ಮುಖಂಡ ಯಶ್ಪಾಲ್ ಸುವರ್ಣ,ಅದಮಾರು ಮಠದ ಗೋವಿಂದರಾಜ್ ಹಾಗೂ ಪರ್ಯಾಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.