ಹಾಲಿನ ದರ ಹೆಚ್ಚಳ‌ ಮಾಡುವ ಯಾವುದೇ ಪ್ರಸ್ತಾಪ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ

ಮೈಸೂರು ಎ.11 : ಹಾಲಿನ ದರ ಹೆಚ್ಚಳ‌ ಕುರಿತಾಗಿ ಉಂಟಾಗಿದ್ದ ಊಹಾಪೋಹಗಳಿಗೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಹಾಲಿನ ದರ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾಪ ಇಲ್ಲ . ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡುವುದಿಲ್ಲ. ಆಯಾ ಹಾಲು ಒಕ್ಕೂಟದವರು ಲಾಭಾಂಶದಲ್ಲಿ ರೈತರಿಗೆ ಕೊಡಬಹುದು. ಇದರಲ್ಲಿ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿದ್ದಾರೆ.

ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ನಿಂದ ಕಾರ್ಯಕ್ರಮ : ಇದೇ ವೇಳೆ ಬೆಲೆ ಏರಿಕೆ ವಿಚಾರವಾಗಿ ಕಾಂಗ್ರೆಸ್ ಪ್ರತಿಭಟನೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಯಾವುದಾದರೊಂದು ಕಾರ್ಯಕ್ರಮ ಮಾಡುತ್ತಿದೆ. ನಾವೂ ಇದ್ದೇವೆ ಎಂದು ತೋರಿಸಿಕೊಳ್ಳಲು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ ಅಷ್ಟೇ ಎಂದರು.

Leave a Reply

Your email address will not be published. Required fields are marked *

error: Content is protected !!