ನನ್ನಿಂದಲೇ ಎನ್ನುವವರನ್ನೇ ಹೈಕಮಾಂಡ್ ಮನೆಯಲ್ಲಿ ಕೂರಿಸಿದೆ: ವಿಜಯೇಂದ್ರಗೆ ಟಾಂಗ್ ಕೊಟ್ಟ ಯತ್ನಾಳ್
ವಿಜಯಪುರ ಎ.11 : ನನ್ನಿಂದಲೇ ಬಿಜೆಪಿ ಎನ್ನುವವರನ್ನೇ ಹೈಕಮಾಂಡ್ ಮನೆಯಲ್ಲಿ ಕೂರಿಸಿದೆ, ಇನ್ನು ವಿಜಯೇಂದ್ರ ನಿನ್ನೆ ಮೊನ್ನೆ ಹುಟ್ಟಿದ ಹುಡುಗ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.
ಈ ವಿಚಾರವಾಗಿ ನಿನ್ನೆ ವಿಜಯಪುರದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ, ಮೊಮ್ಮಕ್ಕಳಿಗೆ ಟಿಕೆಟ್ ಕೊಡುವ ಕಾಲ ಬಿಜೆಪಿಯಲ್ಲಿ ಹೋಯ್ತು. ಮೊನ್ನೆ ಉತ್ತರ ಪ್ರದೇಶದಲ್ಲಿ ಈ ಪ್ರಯೋಗ ಆಗಿದೆ. ಅಪ್ಪನ ಜಾಗ ನನಗೆ ಬೇಕು, ಅಪ್ಪನ ಸ್ಥಳ ನನಗೆ ಕೊಡಿ ಎನ್ನುವುದು ಇನ್ನು ಮುಂದೆ ಯಾವುದೂ ಉಳಿಯುವುದಿಲ್ಲ ಎಂಬ ವಿಶ್ವಾಸ ನನಗಿದೆ. ಆ ಭ್ರಮೆಯಲ್ಲಿ ಇರುವುದಕ್ಕಿಂದ ಈಗೇನಾದರೂ ಉದ್ಯೋಗ ಮಾಡಿಕೊಂಡಿದ್ದರೆ ಅದರಲ್ಲಿ ಮುಂದುವರೆಯುವುದು ಒಳ್ಳೆಯದು ಎಂದು ಅವರು ಹೇಳಿದ್ದಾರೆ.
ಹಾಗೂ ಇದೇ ವೇಳೆ ಅವರು ಬಿಜೆಪಿಯಲ್ಲಿ ಇನ್ನು ಮುಂದೆ ವಂಶಪಾರಂಪರೆಗೆ ಅವಕಾಶವಿಲ್ಲ, ಪರಿವಾರ ವಾದ್ ಬಿಜೆಪಿಯಲ್ಲಿ ನಡೆಯಲ್ಲ ಎಂದು ಪ್ರಧಾನ ಮಂತ್ರಿಗಳು ಹೇಳಿರುವುದನ್ನು ನೆನಪಿಸಿಕೊಂಡರು