ಸಂತೋಷ ಯಾರೆಂಬುದೇ ನನಗೆ ಗೊತ್ತಿಲ್ಲ.ನಾನು ಯಾವುದೇ ತಪ್ಪು ಮಾಡಿಲ್ಲ ನಾನ್ಯಾಕೆ ರಾಜಿನಾಮೆ ನೀಡಲಿ? :ಸಚಿವ ಕೆ.ಎಸ್. ಈಶ್ವರಪ್ಪ

ಮೈಸೂರು ಎ.12 : ಉಡುಪಿಯಲ್ಲಿ ‘ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಯಾರೆಂಬುದೇ ನನಗೆ ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ನಾನ್ಯಾಕೆ ರಾಜಿನಾಮೆ ನೀಡಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ.ಇದರಲ್ಲಿ ನನ್ನ ಪಾತ್ರ ಇಲ್ಲ. ಹೀಗಾಗಿ, ನಾನು ರಾಜೀನಾಮೆ ನೀಡುವುದಿಲ್ಲ’ ಎಂದಿದ್ದಾರೆ.

‘ಆತ ನಮ್ಮ ಇಲಾಖೆ ಮೇಲೆ ಆರೋಪ ಮಾಡಿದ್ದ. ಈ ವಿಚಾರವಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಯಾಲಯದಿಂದ ಆತನಿಗೆ ನೋಟಿಸ್ ಬಂದಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ಹೇಳಿದರು.

ಈ ವೇಳೆ ನಾನು ಯಾವುದೇ ತಪ್ಪನ್ನು ಮಾಡಿಲ್ಲ ಎಂದ ಅವರು, ಸಂತೋಷ್ ಪಾಟೀಲ್ ಅವರು ದೆಹಲಿಯಲ್ಲಿ ಡಿ.ಕೆ ಸುರೇಶ್, ಹನುಮಂತಯ್ಯ ಅವರನ್ನು ಸಂತೋಷ್ ಭೇಟಿ ಮಾಡಿ ಸುದ್ದಿಗೋಷ್ಠಿ ನಡೆಸಿದ್ದರು.ಆ ಕಾಪಿಯನ್ನು ನಾನು ತೆಗೆದುಕೊಂಡು ಗುತ್ತಿಗೆದಾರ ಸಂತೋಷ್ ವಿರುದ್ಧ ಕೋರ್ಟ್ ಲ್ಲಿ ಮಾನನಷ್ಟ ಕೇಸ್ ಹಾಕಿದ್ದೇನೆ.

ಕೋಟ್‌ರ್ನಿಂದ ನೋಟಿಸ್ ಹೋದ ನಂತರ ಭೀತಿಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು. ನೋಟಿಸ್ ಹೋದ ನಂತರ ಗಾಬರಿಯಾಗಿದ್ದಾರೆ ಅನಿಸುತ್ತೆ. ಸಂತೋಷ್ ಆತ್ಮಹತ್ಯೆಗೂ, ನನಗೂ ಏನೂ ಸಂಬಂಧವಿಲ್ಲ. ಸಂತೋಷ್ ಅವರನ್ನು ನಾನು ನೋಡಿಲ್ಲ. ಅವರು ಯಾರೂ ಎಂದೇ ನನಗೆ ಗೊತ್ತಿಲ್ಲ ಎಂದು ಹೇಳಿದರು.

40 ಪರ್ಸೆಂಟ್ ಕಮಿಷನ್ ಕುರಿತು ಗುತ್ತಿಗೆದಾರ ಸಂತೋಷ್ ನನ್ನ ಬಗ್ಗೆಯೂ ಅಲ್ಲ, ನಮ್ಮ ಕಡೆ ಅವರು ಯಾರೋ ಕೇಳುತ್ತಿದ್ದಾರೆ ಎಂದು ಪತ್ರ ಬರೆದಿದ್ದಾರೆ. ಇದರಿಂದಾಗಿ ನಾನು ಕಾನೂನುಬದ್ಧವಾಗಿ ಪ್ರಜಾಪ್ರಭುತ್ವದಲ್ಲಿ ಏನು ವ್ಯವಸ್ಥೆ ಇದೆಯೋ ಅದನ್ನು ಮಾಡಿದ್ದೇನೆ. ಸುಮ್ಮನೆ ಯಾವುದೇ ರಾಜಕಾರಣಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಗೂ ಪತ್ರಗಳನ್ನು ಬರೆದರೆ ಸಹಿಸಲು ಸಾಧ್ಯವಿಲ್ಲ. ಇದರಿಂದಾಗಿ ನಾನು ಕೋಟ್‌ರ್ಗೆ ಹೋಗಿದ್ದೇನೆ ಎಂದು ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಈಚೆಗೆ ಶೇ 40ರಷ್ಟು ಪರ್ಸೆಂಟೇಜ್ ಆರೋಪ ಮಾಡಿ ಸುದ್ದಿಯಾಗಿದ್ದ ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!