ಸಂತೋಪ್ ಆತ್ಮಹತ್ಯೆ ಪ್ರಕರಣ ಕೆಎಸ್ ಈಶ್ವರಪ್ಪ ಅವರನ್ನು ಬಂಧಿಸಿ ಸಚಿವ ಸ್ಥಾನದಿಂದ ವಜಾಗೊಳಿಸಿ: ಕಾಂಗ್ರೆಸ್ ಒತ್ತಾಯ
ಬೆಂಗಳೂರು ಎ.12 : ಗುತ್ತಿಗೆದಾರ ಸಂತೋಪ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಬಂಧಿಸಿ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು,”ಗುತ್ತಿಗೆದಾರ ಸಂತೋಷ್ ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ” ಆದ್ದರಿಂದ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಿ ಅವರನ್ನು ಸಚಿವ ಸ್ಥಾನದಿಂದ ತೆಗೆಯಬೇಕು ಎಂದು ಹೇಳಿದ್ದಾರೆ.
ಈ ನಡುವೆ ಘಟನೆಯನ್ನು ಇದೊಂದು ಕೊಲೆ ಎಂದು ಕಾಂಗ್ರೆಸ್ ಪಕ್ಷ ಆರೋಪ ಮಾಡಿದ್ದು, ಸೂಕ್ತವಾದ ತನಿಖೆಯಾಗಬೇಕೆಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.