ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಪ್ರಕಟ,ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ
ಉಡುಪಿ ಮೇ.19 (ಉಡುಪಿ ಟೈಮ್ಸ್ ವರದಿ ): 2021-22 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟಗೊಂಡಿದ್ದು, ಕಳೆದ 10 ವರ್ಷಗಳಲ್ಲಿ ದಾಖಲೆಯ ಫಲಿತಾಂಶ ಈ ಬಾರಿ ಲಭ್ಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಅವರು, ಈ ಬಾರಿ 83.63 ಶೇ. ಫಲಿತಾಂಶ ಲಭಿಸಿದ್ದು, ಕಳೆದ 10 ವರ್ಷಗಳಲ್ಲಿ ದಾಖಲೆಯ ಫಲಿತಾಂಶ ಈ ಬಾರಿ ಲಭ್ಯವಾಗಿದೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿದ್ದು,
7.30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 40,061 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ನಿಂದ ಪಾಸ್ ಆಗಿದ್ದಾರೆ. 90.29 ಶೇ. ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದರೆ, ಬಾಲಕರು 81.3 % ಉತ್ತೀರ್ಣರಾಗುವುದರೊಂದಿಗೆ ಈ ಬಾರಿಯೂ ವಿದ್ಯಾಥಿನಿಯರೇ ಮೇಲು ಗೈ ಸಾಧಿಸಿದ್ದಾರೆ. ಈ ಬಾರಿ ಪರೀಕ್ಷೆಗೆ ರಾಜ್ಯಾದ್ಯಂತ 8,20,900 ನೋಂದಾಯಿಸಿಕೊಂಡಿದ್ದು, 8,07,206 ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು ಎಂದು ತಿಳಿಸಿದ್ದಾರೆ.
ವಿಜಯ ಪುರದ ಅಮಿತ್ ಮಾದರ್ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದು, ತುಮಕೂರಿನ ಭೂಮಿಕಾ ಬಿಆರ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಸರಕಾರಿ ಶಾಲೆಯಲ್ಲಿ 88 ಶೇ. ಹಾಗೂ ಅನುದಾನಿತ ಶಾಲೆಯಲ್ಲಿ 87.84 ಫಲಿತಾಂಶ ಲಭ್ಯವಾಗಿದೆ. ಇನ್ನು ಅನುತ್ತಿರ್ಣರಾದ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದ್ದು, ಮೇ.27 ರಿಂದ ಜೂನ್ 4 ರ ವರೆಗೆ ಪೂರಕ ಪರೀಕ್ಷೆ ನಡೆಯಲಿದೆ
ಈ ಬಾರಿ ಪರೀಕ್ಷಾ ಫಲಿತಯಾಂಶದಲ್ಲಿ ನಂಬರ್ ವನ್ ಸ್ಪರ್ಧೆ ಇಲ್ಲ ಇದಕ್ಕೆ ಕಾರಣ ಈ ಬಾರಿ ಶಿಕ್ಷಣ ಇಲಾಖೆ ಫಲಿತಾಂಶವನ್ನು ಗ್ರೇಡ್ ವ್ಯವಸ್ಥೆ ಅಳವಡಿಸಿಕೊಂಡಿದೆ. ಈ ಪೈಕಿ ಎ ಗ್ರೇಡ್ ನಲ್ಲಿ 32 ಜಿಲ್ಲೆಗಳು ಹಾಗೂ ಬಿ ಗ್ರೇಡ್ ನಲ್ಲಿ 2 ಜಿಲ್ಲೆಗಳು ಇವೆ ಹಾಗೂ ರಾಜ್ಯದ 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಲಭ್ಯವಾಗಿದೆ ಎಂದು ತಿಳಿದು ಬಂದಿದೆ.
ಒತ್ತಡದಲ್ಲಿರುವವರಿಗೆ ಸಹಾಯವಾಣಿ: ಇದೇ ಮೊದಲ ಬಾರಿಗೆ ಎಸ್ಎಸ್ಎಲ್ಸಿ ಫಲಿತಾಂಶ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಮ್ಮ ಸಹಾಯದೊಂದಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ಕರೆದಿದೆ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಈ ಮೂಲಕ ಸಲ್ಲಿಸಲಾಗುತ್ತಿದೆ ವಿದ್ಯಾರ್ಥಿಗಳು 080 46 11 0007 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ