ಕುಂದಾಪುರ:ಸಾರ್ವಜನಿಕ ಸ್ಥಳದಲ್ಲಿ ಮದ್ಯಸೇವನೆ ಮಾಡುತ್ತಿದ್ದ ವ್ಯಕ್ತಿ ಬಂಧನ
ಕುಂದಾಪುರ ಮೇ 25 (ಉಡುಪಿ ಟೈಮ್ಸ್ ವರದಿ) : ತಾಲೂಕಿನ ಕಾವ್ರಾಡಿ ಗ್ರಾಮದ ಕಂಡ್ಲೂರು ದೂಪದಕಟ್ಟೆ ಬಸ್ ನಿಲ್ಧಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮದ್ಯಸೇವನೆ ಮಾಡುತ್ತಿದ್ದ ಮುಡೂರ ಮೊಗವೀರ ಎಂಬಾತನನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಮದ್ಯ ಸೇವನೆ ಮಾಡುತ್ತಿರುವುದಾಗಿ ಖಚಿತ ಮಾಹಿತಿ ಪಡೆದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ನಿರಂಜನ ಗೌಡ ಬಿ.ಎಸ್ ರವರು ಇತರ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಸಾರ್ವಜನಿಕವಾಗಿ ಮದ್ಯ ಸೇವನೆ ಮಾಡುತ್ತಿದ್ದ ಮುಡೂರ ಮೊಗವೀರ (50) ಎಂಬಾತನ್ನು ಹಾಗೂ ಆತನ ಬಳಿ ಇದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.