ಬೆಂಗಳೂರು ಗಲಭೆ ಪ್ರಕರಣ – ಮಾಜಿ ಕಾರ್ಪೋರೇಟರ್ ಜಾಕೀರ್ ಬಂಧನ.
ಬೆಂಗಳೂರು: ಬೆಂಗಳೂರು ಗಲಬೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಕಾರ್ಪೋರೇಟರ್ ಜಾಕೀರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಜಾಕೀರ್ ಒಂದು ಬಾರಿ ವಿಚಾರಣೆಗೆ ಹಾಜರಾಗಿದ್ದು, ಬಳಿಕ ತಲೆಮರೆಸಿಕೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡರೂ ಆಗಿರುವ ಮಾಜಿ ಮೇಯರ್ ಆರ್.ಸಂಪತ್ ರಾಜ್ ಹಾಗೂ ಜಾಕೀರ್ ವಿರುದ್ಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ, ದೋಷಾರೋಪ ಪಟ್ಟಿ ಸಲ್ಲಿಕೆ ನಂತರವೂ ತಲೆಮರೆಸಿಕೊಂಡಿದ್ದ ಸಂಪತ್‌ರಾಜ್ ನನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಇದೀಗ ಗಲಭೆ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದ ಮಾಜಿ ಕಾರ್ಪೋರೇಟರ್ ಜಾಕೀರ್ ನನ್ನು ಸಿಸಿಬಿ ಪೊಲಿಸರು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ