ಬರೇಲಿ- ಅಗ್ರಾ ರಸ್ತೆಯಲ್ಲಿ ಟ್ಯಾಂಕರ್ ಹಾಗೂ ಟ್ರಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ, 6 ಸಾವು

ಬರೇಲಿ ಜೂ.15 : ಬರೇಲಿ- ಅಗ್ರಾ ರಸ್ತೆಯಲ್ಲಿ ಟ್ಯಾಂಕರ್ ಹಾಗೂ ಟ್ರಾಕ್ಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡ ಘಟನೆ ನಿನ್ನೆ ಮಧ್ಯಾಹ್ನದ ವೇಳೆ ನಡೆದಿದೆ.

ಅನಿತಾ ದೇವಿ (40), ಸಂಗೀತಾ (19), ಸುಷ್ಮಾ (65), ವೀರಾ ದೇವಿ (75), ಪೂನಂ (28), ಸಹದೇವ್ (12) ಮೃತ ದುರ್ಧೈವಿಗಳು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಬದೌನ್ ನ ಸರ್ಕಾರಿ ಮೆಡಿಕಲ್ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬರೇಲಿಯ ಮೂಸಜಾಗ್ ಪ್ರದೇಶದ ಔರಮೈ ಗ್ರಾಮಕ್ಕೆ ಸೇರಿದ ಕುಟುಂಬಸ್ಥರು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಗಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳಿ ವಾಪಾಸ್ಸಾಗುತ್ತಿದ್ದ ವೇಳೆ ಎದುರಿನಿಂದ ಟ್ಯಾಂಕರ್‍ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದು ಐವರು ಮಹಿಳೆಯರು ಮತ್ತು ಒಂದು ಮಗು ಸೇರಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಅವರ ವಾಹನವನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಒ ಪಿ ಸಿಂಗ್ ತಿಳಿಸಿದ್ದಾರೆ. ಅಪಘಾತದ ಬಳಿಕ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!