ಆಟೋ ರಿಕ್ಷಾ ಪಲ್ಟಿ: ಮೂರು ದಿನದ ಹಸುಗೂಸು ಸಾವು
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾಗಿ ಮೂರು ದಿನದ ಹಸುಗೂಸು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ನಡೆದಿದೆ. ಗುರುಪುರ ಕೈಕಂಬ ಮೂಲದ ಉಮೈರಾ ಎಂಬ ಮಹಿಳೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
ಬುಧವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಅಟೋ ರಿಕ್ಷಾದಲ್ಲಿ ತೆರಳಿದ್ದರು. ಅಟೋ ರಿಕ್ಷಾ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ಬಂದಾಗ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಿಂದ ತಾಯಿಯ ಮಡಿಲಲ್ಲಿದ್ದ ಹಸುಗೂಸು ಹೊರಗೆಸೆಯಲ್ಪಟ್ಟು ಸ್ಥಳದಲ್ಲಿಯೇ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಚಾಲಕ ಸಹಿತ ಇಬ್ಬರು ಮಹಿಳೆಯರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ