ಆಗುಂಬೆ ಘಾಟಿ ಗುಡ್ಡ ಕುಸಿತ, ಬದಲಿ ಮಾರ್ಗದ ವಿವರ ಇಲ್ಲಿದೆ
ಶಿವಮೊಗ್ಗ (ಉಡುಪಿ ಟೈಮ್ಸ್ ವರದಿ) : ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಗುಡ್ಡ ಕುಸಿತವಾಗಿರುವ ಕಾರಣ ಘಾಟಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಜುಲೈ 12ರ ಬೆಳಗ್ಗೆ 8 ಗಂಟೆವರೆಗೆ ನಿರ್ಬಂಧ ವಿಧಿಸಲಾಗಿದೆ.
ಕಳೆದ ಕೆಲ ದಿನಗಳಿಂದ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುಡ್ಡ ಕುಸಿತವಾದ ಜಾಗದಲ್ಲಿ ಮಣ್ಣು ತೆರವು ಕಾರ್ಯಾಚರಣೆ ವಿಳಂಬವಾಗಿದೆ. ಆದರೆ ಜುಲೈ 12 ರಿಂದ 30 ರವರೆಗೆ ಆಗುಂಬೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿ ಕೊಡಲಾಗುವುದು. ಅಲ್ಲದೆ ಘನ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಘಾಟಿ ಮಾರ್ಗವಾಗಿ ಸಂಚರಿಸುವ ಘನವಾಹನಗಳು ಈ ಬದಲಿ ಮಾರ್ಗದ ಮೂಲಕ ಸಂಚರಿಸಬೇಕಾಗಿದೆ.
- ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಕಾರ್ಕಳ, ಮಂಗಳೂರು.
- ತೀರ್ಥಹಳ್ಳಿ, ಆಗುಂಬೆ, ಶೃಂಗೇರಿ, ಕಾರ್ಕಳ, ಮಂಗಳೂರು
- ತೀರ್ಥಹಳ್ಳಿ, ಮಾಸ್ತಿಕಟ್ಟೆ, ಕುಂದಾಪುರ ಮಾರ್ಗದಲ್ಲಿ ವಾಹನ ಸಂಚಾರ ನಡೆಸುವಂತೆ ಸೂಚನೆ