ಪಣಜಿ : ಕಾಂಗ್ರೆಸ್ ಶಾಸಕಾಂಗ ಸಭೆಗೆ ಪಕ್ಷದ ಏಳು ಶಾಸಕರು ಗೈರು;ಕಾಂಗ್ರೆಸ್ ನಿರಾಕರಣೆ

ಪಣಜಿ ಜು.11 : ಕಾಂಗ್ರೆಸ್ ಶಾಸಕಾಂಗ ಸಭೆಗೆ ಪಕ್ಷದ ಏಳು ಶಾಸಕರು ಗೈರಾಗಿರುವ ಸುದ್ದಿಯೊಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಈ ವರ್ಷದ ಆರಂಭದಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ದಿಗಂಬರ್ ಕಾಮತ್ ಶನಿವಾರ ನಡೆದ ಶಾಸಕರ ಸಭೆಯಲ್ಲಿ ಹಾಜರಾಗಿರಲಿಲ್ಲ. ಮೈಕೆಲ್ ಲೋಬೋ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿದ್ದಕ್ಕೆ ಕಾಮತ್ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.

ಆದರೆ ಇದನ್ನು ಕಾಂಗ್ರೆಸ್ ನಿರಾಕರಿಸಿದ್ದು, ವಿಧಾನಸಭೆಯ ಎರಡು ವಾರಗಳ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದಿದೆ ಹಾಗೂ ಆಡಳಿತಾರೂಢ ಬಿಜೆಪಿಯಿಂದ ಇಂತಹ ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಗೋವಾ ಕಾಂಗ್ರೆಸ್ ಮುಖ್ಯಸ್ಥ ಅಮಿತ್ ಪಾಟ್ಕರ್ ಹೇಳಿದ್ದಾರೆ ಎಂಬುದಾಗಿ ಸುದ್ಧಿ ಸಂಸ್ಥೆಯೊಂದು ವರದಿ ಮಾಡಿದೆ

ಗೋವಾದ 40 ಸದಸ್ಯ ಬಲದ ವಿಧಾನಸಭೆಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‍ಡಿಎ) 25 ಹಾಗೂ ಪ್ರತಿಪಕ್ಷ ಕಾಂಗ್ರೆಸ್‍ನಿಂದ 11 ಸದಸ್ಯರಿದ್ದಾರೆ.

Leave a Reply

Your email address will not be published. Required fields are marked *

error: Content is protected !!