ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ: ಡಾ. ಕೆ. ಸುಧಾಕರ್

ಬೆಂಗಳೂರು, ಆ.8 : ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನಾನು ಹೇಳಿಕೆ ನೀಡುವುದು ಸರಿಯಲ್ಲ. ಬದಲಾವಣೆ ಮಾಡಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರದೇ ನಾಯಕತ್ವದಲ್ಲಿ ಮುಂಬರುವ ಚುನಾವಣೆ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಕಟೀಲು ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆದರೆ ಸಂತೋಷ. ಆದರೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!