ಬೆಂಗಳೂರು: ಬಿಲ್ಡರ್ ಕೊಲೆ ಪ್ರಕರಣ ಭೂಗತ ಪಾತಕಿ ರವಿ ಪೂಜಾರಿ ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು

ಬೆಂಗಳೂರು, ಆ.22 : ಇಪ್ಪತ್ತೊಂದು ವರ್ಷಗಳ ಹಿಂದೆ ನಡೆದಿದ್ದ ಬೆಂಗಳೂರಿನ ಬಿಲ್ಡರ್ ಸುಬ್ಬರಾಜು ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.

2001 ಜನವರಿ 5ರಂದು ಬಿಲ್ಡರ್ ಸುಬ್ಬರಾಜು ಅವರನ್ನು ಶೇಷಾಧ್ರಿಪುರಂ ನ ಅವರ ಕಚೇರಿಯಲ್ಲೇ ಕೊಲೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಪ್ರತಿಷ್ಠಿತ ಪ್ರದೇಶದಲ್ಲಿ ಸುಬ್ಬರಾಜು ಆಸ್ತಿ ಕೊಳ್ಳಲು ಮುಂದಾಗಿದ್ದು, ಆಗ ಬೆಂಗಳೂರಿನ ಭೂಗತಲೋಕ ಆಳುತ್ತಿದ್ದ ಮುತ್ತಪ್ಪ ರೈ ಅವರಿಂದ ಸುಬ್ಬರಾಜುಗೆ ಬೆದರಿಕೆ ಇತ್ತು ಎನ್ನಲಾಗಿದೆ. ಮಾತ್ರವಲ್ಲದೆ ಮುತ್ತಪ್ಪ ರೈ , ರವಿ ಪೂಜಾರಿ ಮತ್ತಿತರರನ್ನು ಬಳಸಿ ಸುಬ್ಬರಾಜುವಿನ ಹತ್ಯೆ ಮಾಡಿಸಿದ್ದ ಎಂಬ ಆರೋಪ ಕೂಡಾ ಮಾಡಲಾಗಿತ್ತು. ಸುಬ್ಬರಾಜು ಹತ್ಯೆಗೆ, ರವಿ ಪೂಜಾರಿ ಇತರ ಏಳು ಮಂದಿ ಜೊತೆ ಸೇರಿ ಸ್ಕೆಚ್ ಹಾಕಿದ್ದು, ಯೂಸುಫ್ ಬಚಕಾನ ಮತ್ತು ನಿತಿನ್ ಸಾವಂತ್ ಎಂಬಿಬ್ಬರು ಶೂಟರ್‍ಗಳನ್ನು ನೇಮಿಸಲಾಗಿತ್ತು ಎಂದು ಹೇಳಲಾಗಿತ್ತು.

ಇದೀಗ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಭೂಗತಪಾತಕಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.

Leave a Reply

Your email address will not be published. Required fields are marked *

error: Content is protected !!