ಎಸಿಬಿ ರದ್ದತಿ ಕುರಿತು ಸರಕಾರದಿಂದ ಸುಪ್ರೀಂ ಕೋರ್ಟ್ ಮೊರೆ ಹೋಗುವುದಿಲ್ಲ: ಮುಖ್ಯಮಂತ್ರಿ

ಬೆಂಗಳೂರು ಆ.23 : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದತಿ ಕುರಿತು ಸರಕಾರದಿಂದ ಸುಪ್ರೀಂ ಕೋರ್ಟ್ ಮೊರೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ವಿಚಾರವಾಗಿ ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ‘ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿಗೆ ಬದ್ಧರಾಗಿದ್ದೇವೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಹೋಗದಿರಲು ಸಚಿವ ಸಂಪುಟದಲ್ಲಿ ಅಂದೇ ತೀರ್ಮಾನ ಮಾಡಿದ್ದೇವೆ. ಅದಕ್ಕೆ ನಾವು ಬದ್ಧರಿದ್ದೇವೆ. ಎಸಿಬಿ ರದ್ದತಿ ಕುರಿತು ರಾಜ್ಯ ಉಚ್ಚ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಿಲ್ಲ. ಹೈಕೋರ್ಟ್ ಆದೇಶ ಪಾಲಿಸುತ್ತೇವೆಯೇ ಹೊರತು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ. ಯಾರೋ ಅರ್ಜಿ ಸಲ್ಲಿಸಿರುವುದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ’ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!