2023 ರಲ್ಲಿ ಎಚ್ ‌ಡಿ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿ ಆಗ್ತಾರೆ – ನಿಖಿಲ್ ಕುಮಾರಸ್ವಾಮಿ ಭವಿಷ್ಯ

ಮಂಡ್ಯ : 2023 ಕ್ಕೆ ಎಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಯಾಗಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಂಡ್ಯದ ಕೆ.ಎಂ.ದೊಡ್ಡಿಯಲ್ಲಿ ನಡೆದ ಕಾರ್ಯಕ್ರಮ ವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯಾಗಿ ಮಾಡುವುದೇ ನನ್ನ ಗುರಿಯಾಗಿದ್ದು, ಇದಕ್ಕಾಗಿ ರಾಜ್ಯಾಧ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗುವುದಾಗಿ ತಿಳಿಸಿದ್ದಾರೆ.

2023 ಕ್ಕೆ ಹೆಚ್.ಡಿ ಕುಮಾರಸ್ವಾಮಿಯವರು ಎಲ್ಲಾ ಜಿಲ್ಲೆಗಳಿಗೂ ಅನುದಾವನ್ನು ಪಕ್ಷ ಭೇದ ಮರೆತು ನೀಡಿದ್ದಾರೆ, ಆದ್ರೆ ಕೆಲವರು ಅವರನ್ನು ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಮಾತ್ರವೇ ಸಿಎಂ ಆಗಿದ್ದಾರೆ ಎಂಬುದಾಗಿ ಟೀಕಿಸಿದ್ದಾರೆ. ಜೆಡಿಎಸ್ ಪಕ್ಷವು ಕೇವಲ ಮಂಡ್ಯ, ಮೈಸೂರು, ರಾಮನಗರಕ್ಕೆ ಮಾತ್ರವೇ ಸೀಮಿತವಾಗಿಲ್ಲ. ಉತ್ತರ ಕರ್ನಾಟಕ ಭಾಗದಲ್ಲೂ ಪಕ್ಷ ಪ್ರಬಲವಾಗಿದೆ. ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿಯಾಗಿದ್ದು, ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಪ್ರವಾಸ ಕೈಗೊಳ್ಳಲಾಗುತ್ತದೆ ಎಂದರು.

Leave a Reply

Your email address will not be published. Required fields are marked *

error: Content is protected !!