ಟೇಬಲ್ ಟೆನಿಸ್ ನಲ್ಲಿ ರಾಜ್ಯ ಮಟ್ಟಕ್ಕೆ ಹಾಗೂ ಗೀತಗಾಯನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ವಿದ್ಯಾರ್ಥಿಗಳು
ಕುಂದಾಪುರ (ಉಡುಪಿ ಟೈಮ್ಸ್ ವರದಿ): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಪ್ರೌಢಶಾಲೆಗಳ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ ಯಲ್ಲಿ ಭಾಗವಹಿಸಿ, ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿಭಾಗವಹಿಸಿ, ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿ, ಸ್ಥಳೀಯ ಸಂಸ್ಥೆ ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಕುಂದಾಪುರದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದೇಶಭಕ್ತಿಗೀತಗಾಯನ ಸ್ಪರ್ಧೆಯಲ್ಲಿ ಎಚ್.ಎಮ್.ಎಮ್ ನ 4ನೇ ತರಗತಿಯ ಬುಲ್ ಬುಲ್ ವಿದ್ಯಾರ್ಥಿನಿ ಸಂಹಿತಾ ತಂತ್ರಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಹಾಗೆಯೇ ಪ್ರೌಢಶಾಲೆಯ ಗೈಡ್ಸ್ ವಿದ್ಯಾರ್ಥಿಗಳಾದ ಕ್ಷಮಾ, ವಿಧಾತ್ರಿ, ನಮಿತಾ, ಸುನೀತಾ, ಜಯಶ್ರೀ, ಕೀರ್ತನಾ, ಅನುಷ್ಕಾ ಮತ್ತು ಶ್ರೇಯ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸ್ಕೌಟ್ಸ್ ವಿದ್ಯಾರ್ಥಿಗಳಾದ ಏಳನೇ ತರಗತಿಯ ಕೌಸ್ತುಬ್ ಉಡುಪ, ನಿರಂಜನ್ ಉಡುಪ, ಸಾತ್ವಿಕ್, ಶ್ರವಣ್, ಅರುಷ್ ಐತಾಳ್ ಮತ್ತು 5ನೇ ತರಗತಿಯ ತ್ರಿಶೂಲ್, ಶಮಂತ್, ಪ್ರಣವ್ ಎಸ್ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಟೇಬಲ್ ಟೆನಿಸ್ ನಲ್ಲಿ ರಾಜ್ಯ ಮಠಕ್ಕೆ ಆಯ್ಕೆ ವಿದ್ಯಾರ್ಥಿನಿಯರು ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಮತ್ತು ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆ ಕಲ್ಯಾಣಪುರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿಯರಾದ ಶ್ರಾವ್ಯ, ಪ್ರಾಪ್ತಿ ಮಡಪ್ಪಾಡಿ ಮತ್ತು ಸಾನ್ವಿ ಸಿ, 14ರ ವಯೋಮಾನದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಸಂಸ್ಥೆಯ ದೈಹಿಕ ಶಿಕ್ಷಕರಾದ ನಾಗೇಶ್ ಪ್ರಭು ಮತ್ತು ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರಾದ ವೀರೇಂದ್ರ ನಾಯಕ್, ರೇಖಾ ಕೆ.ಯು, ಮತ್ತು ಸಂಗೀತ ಶಿಕ್ಷಕ ಪ್ರಕಾಶ್ ರವರಿಂದ ತರಬೇತಿಗೊಂಡು ವಿಜೇತರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಚಿಂತನಾ ರಾಜೇಶ್, ವಿವಿಧ ವಿಭಾಗಗಳ ಮುಖ್ಯಸ್ಥರಾದ ಶುಭಾ ಕೆ.ಎನ್ ಮತ್ತು ಜಗದೀಶ್ ಆಚಾರ್ ಸಾಸ್ತಾನಅಭಿನಂದಿಸಿದರು.