ಮಣಿಪಾಲ/ಬೆಂಗಳೂರು: ಶಿಕ್ಷಣ ಸಂಸ್ಥೆಗಳಿಗೆ ಐಟಿ ದಾಳಿ
ಉಡುಪಿ ಸೆ.7(ಉಡುಪಿ ಟೈಮ್ಸ್ ವರದಿ): ಮಣಿಪಾಲದ ಮಾಹೆ (ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್) ನ ಆಡಳಿತ ಕಚೇರಿಯ ಫೈನಾನ್ಸ್ ವಿಭಾಗಕ್ಕೆ ಇಂದು ಬೆಳ್ಳಂಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉಡುಪಿ ಪೊಲೀಸರ ಸಹಕಾರದೊಂದಿಗೆ ಮಣಿಪಾಲ ಯುನಿವರ್ಸಿಟಿಯ ಬೆಂಗಳೂರು ಹಾಗೂ ಮಣಿಪಾಲದ ಕಚೇರಿಗೆ ಇಂದು ಬೆಳಿಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.