ಕುಂದಾಪುರ : ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ನಲ್ಲಿ ವಿನೂತನ ರೀತಿಯಲ್ಲಿ ಶಿಕ್ಷಕ ದಿನಾಚರಣೆ ಆಚರಣೆ
ಕುಂದಾಪುರ (ಉಡುಪಿ ಟೈಮ್ಸ್ ವರದಿ) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಿಕ್ಷಕರು ಡಾ। ಸರ್ವಪಳ್ಳಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿದ್ಯಾರ್ಥಿಗಳು ಶಿಕ್ಷಕರ ಪಾದಗಳಿಗೆ ಪುಷ್ಪಾರ್ಚನೆಗೈದು ಆರತಿ ಬೆಳಗಿ ವಂದಿಸಿ ವಿನೂತನವಾಗಿ ಶಿಕ್ಷಕರ ದಿನಚರಣೆಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಶಿಕ್ಷಕರಿಗಾಗಿ ಅನೇಕ ಕ್ರೀಡೆಗಳೂ ಕೂಡ ಏರ್ಪಟ್ಟವು. ಹಾಗೆಯೇ ವಿಜೇತ ಶಿಕ್ಷಕರಿಗೆ ಬಹುಮಾನ ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಆದರ್ಶ ಆಸ್ಪತ್ರೆ ವತಿಯಿಂದ ನೀಡಲಾದ ಜಿಲ್ಲೆಯ ಆದರ್ಶ ಶಿಕ್ಷಕಿ ಪ್ರಶಸ್ತಿಗೆ ಪಾತ್ರರಾದ ಪ್ರಾಥಮಿಕ ವಿಭಾಗದ ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್ ರವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಅನುಷ್ ಮತ್ತು ಅಮೂಲ್ಯ ಕಾರ್ಯಕ್ರಮವನ್ನು ನಿರೂಪಿಸಿದರೆ, ನತಾಶಾ ಮತ್ತು ಚಿರಾಗ್ ಕಾರ್ಯಕ್ರಮದ ಭಾಗವಾದರು, ವಿದ್ಯಾರ್ಥಿನಿ ಶ್ರೇಯಳ ಭರತನಾಟ್ಯ ಕಾರ್ಯಕ್ರಮ ನಡೆಯಿತು ಶಿಕ್ಷಕ ಪ್ರಕಾಶ್ ಗೀತೆ ಗಾಯನಗೈದರು.