ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗ ಬಾರದೆಂದು ಎನ್‍ಐಎ ದಾಳಿ ನಡೆಸಲಾಗಿದೆ: ಆರಗ ಜ್ಞಾನೇಂದ್ರ

ಶಿವಮೊಗ್ಗ, ಸೆ.27 : ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಾರದೆಂಬ ಕಾರಣಕ್ಕೆ ಎನ್‍ಐಎ ದಾಳಿ ನಡೆಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ರಾಜ್ಯದ ವಿವಿಧ ಕಡೆ ನಡೆಯುತ್ತಿರುವ ಐಎನ್‍ಎ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಎನ್‍ಐಎ ದಾಳಿ ವೇಳೆ ಹಲವರಿಂದ ಆತಂಕ ಸೃಷ್ಟಿಗೆ ಯತ್ನಿಸಲಾಗಿದ್ದು, ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ, ಬಂಧಿತರರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ಸುಮಾರು 40 ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದ್ದು, 75 ಕ್ಕೂ ಅಧಿಕ ಪಿ.ಎಫ್.ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *

error: Content is protected !!