ರಸ್ತೆ ಅಪಘಾತ ಮಗು ಸಹಿತ ಮೂವರಿಗೆ ಗಾಯ

ಬಂಟ್ವಾಳ: ಎರಡು ಕಾರುಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಮಗು ಸಹಿತ ಮೂವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಇಂದು (ಡಿ.3) ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಮಾಣಿ ನಿವಾಸಿ ನಯಾಝ್ ಎಂಬವರು ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ಕಾರಿನಲ್ಲಿದ್ದ ನಯಾಝ್ ಅವರ ಸಂಬಂಧಿಗಳಾದ ಸಫಾ ಹಾಗೂ ಚಿಕ್ಕ ಮಗು ಹಾಗೂ ಮತ್ತೊಂದು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದುಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


ನಯಾಜ್ ರವರು ನೇರಳಕಟ್ಟೆಯಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕೊಡಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ತೆರಳುವ ರಸ್ತೆಯ ಮುಂಭಾಗದಲ್ಲಿ ಮಾಣಿ ಕಡೆಯಿಂದ ಬಂದ ಮತ್ತೊಂದು ಕಾರು ಇವರು ಸಂಚರಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಒಂದು ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ

Leave a Reply

Your email address will not be published. Required fields are marked *

error: Content is protected !!