ತಾಜ್ ಮಹಲ್ ನ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ, ಸೆ.27 : ವಿಶ್ವವಿಖ್ಯಾತ ತಾಜ್ ಮಹಲ್ ನ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ತಾಜ್ ಮಹಲ್ ಬಳಿ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡಬೇಕು ಎಂದು ಹಿರಿಯ ವಕೀಲ ಎಡಿಎನ್ ರಾವ್ ಅವರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಅಭಯ್ ಎಸ್ ಓಕಾ ಅವರನ್ನೊಳಗೊಂಡ ಪೀಠವು ತಾಜ್ ಮಹಲ್ ನ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಾ ಅಭಿವೃದ್ಧಿ ಪ್ರಾಧಿಕಾರಕ್ಕೆ ಆದೇಶ ನೀಡಿದೆ.

ಸಮಾಧಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವೂ ಆಗಿದ್ದು ಮೇ 2000 ರಲ್ಲಿ ಇದೇ ರೀತಿಯ ಆದೇಶವನ್ನು ನೀಡಲಾಗಿತ್ತು ಆದರೆ, ಸಮಯದ ದೀರ್ಘಾವಧಿಯ ದೃಷ್ಟಿಯಿಂದ ಆ ನಿರ್ದೇಶನವನ್ನು ಪುನರುಚ್ಚರಿಸುವುದು ಸೂಕ್ತವಾಗಿದೆ ಎಂದು ವಕೀಲ ರಾವ್ ಹೇಳಿದರು. ಆಗ್ರಾ ಅಭಿವೃದ್ಧಿ ಪ್ರಾಧಿಕಾರಕ್ಕೆ ತಾಜ್ ಮಹಲನ್ನು 500 ಮೀಟರ್ ವ್ಯಾಪ್ತಿಯನ್ನು ತಕ್ಷಣವೇ ಎಲ್ಲಾ ವಾಣಿಜ್ಯ ವಹಿವಾಟು ತೆರವುಗೊಳಿಸಲು ನಿರ್ದೇಶಿಸಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!